HomeKarnatakaBIG NEWS: ಜೆಡಿಎಸ್ ಶಾಸಕರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ

BIG NEWS: ಜೆಡಿಎಸ್ ಶಾಸಕರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ

ಬೆಂಗಳೂರು: ಜೆಡಿಎಸ್ ಶಾಸಕರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಮಂಜೂರಾಗಿದ್ದ ಮನೆಗಳನ್ನು ಶಿಫ್ಟ್ ಮಾಡಿದೆ.

ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಮಂಜೂರಾಗಿದ್ದ ಮನೆಗಳನ್ನು ತಡೆದು ಇದೀಗ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಮನೆಗಳನ್ನು ಮಂಜೂರು ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದು ಸಹಜವಾಗಿ ಜೆಡಿಎಸ್ ಶಾಸಕರ ಆಕ್ರೋಶಕ್ಕೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತುರುವೆಕೆರೆ ಕ್ಷೇತ್ರಕ್ಕೆ ಮಂಜೂರಾಗಿದ್ದ 3,375 ಮನೆಗಳನ್ನು ಕುಣಿಗಲ್ ಕ್ಷೇತ್ರಕ್ಕೆ ಶಿಫ್ಟ್ ಮಾಡಲಾಗಿದೆ. ವಸತಿ ಇಲಾಖೆ ಸಚಿವ ಜಮೀರ್ ಅಹ್ಮದ್ ಅವರ ಕಾರ್ಯವೈಖರಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular