HomeKarnatakaಹೇಗೆ ಬದಲಾಗಲಿದೆ ಜೆಡಿಎಸ್ ಪಕ್ಷದ ಚಿಹ್ನೆ?

ಹೇಗೆ ಬದಲಾಗಲಿದೆ ಜೆಡಿಎಸ್ ಪಕ್ಷದ ಚಿಹ್ನೆ?

ಜಾತ್ಯಾತೀತ ಜನತಾದಳ (ಜೆಡಿಎಸ್) ಪಕ್ಷದ ಚಿಹ್ನೆ ಬದಲಾಗಲಿದೆ. ಹೌದು ಪಕ್ಷ ಸ್ಥಾಪನೆಗೊಂಡು 25 ವರ್ಷ ಪೂರ್ಣಗೊಂಡಿರುವ ಕಾರಣ ಚಿಹ್ನೆಯನ್ನು ಬದಲಾವಣೆ ಮಾಡುವ ಕುರಿತು ಪಕ್ಷದಲ್ಲಿ ಚರ್ಚೆಗಳು  ನಡೆಯುತ್ತಿವೆ.

ಕೆಲವು ದಿನಗಳ ಹಿಂದೆ ಪಕ್ಷದ ರಾಜ್ಯ ಕಚೇರಿ ಬೆಂಗಳೂರಿನ ಜೆ.ಪಿ. ಭವನದಲ್ಲಿ ಕೋರ್‌ ಕಮಿಟಿ ಅಧ್ಯಕ್ಷ ಎಂ.ಕೃಷ್ಟಾ ರೆಡ್ಡಿ ಹಾಗೂ ಇತರ ಪದಾಧಿಕಾರಿಗಳ ಸಭೆಯಲ್ಲಿ ಈ ಕುರಿತು ಒಂದು ಸುತ್ತಿನ ಸಭೆ ನಡೆದಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಮತ್ತು ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಒಪ್ಪಿಗೆ ಪಡೆದು ಚಿಹ್ನೆಯನ್ನು ಬದಲಾವಣೆ ಮಾಡಲಾಗುತ್ತದೆ. ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಚುನಾವಣೆಗೆ ಪಕ್ಷ ತಯಾರಿ ಆರಂಭಿಸಿದ್ದು, ಆ ಚುನಾವಣೆಯಲ್ಲಿಯೇ ಚಿಹ್ನೆ ಬದಲಾಗಲಿದೆಯೇ? ಕಾದು ನೋಡಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಮಾಜಿಕ ಜಾಲತಾಣದಲ್ಲಿ ವೈರಲ್: ಜೆಡಿಎಸ್ ಪಕ್ಷದ ನೂತನ ಚಿಹ್ನೆಯಲ್ಲಿ ಚಕ್ರವನ್ನು ಅಳವಡಿಕೆ ಮಾಡಲಾಗುತ್ತದೆ ಎಂಬ ಸುದ್ದಿ ಇದೆ. ಈ ಸುದ್ದಿಯನ್ನು ನೋಡಿದ ಪಕ್ಷದ ಅಭಿಮಾನಿಗಳು, ಕಾರ್ಯಕರ್ತರು ಜೆಡಿಎಸ್ ಪಕ್ಷದ ಹೊಸ ಚಿಹ್ನೆಯ ವಿನ್ಯಾಸವನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುತ್ತಿದ್ದಾರೆ.

ಸದ್ಯ ತನೆ ಹೊತ್ತ ಮಹಿಳೆಯ ಚಿಹ್ನೆಯನ್ನು ಪಕ್ಷ ಹೊಂದಿದೆ. ತೆನೆ ಹೊತ್ತ ಮಹಿಳೆಯ ಹಿಂದೆ ಚಕ್ರ ಇರುವಂತೆ ಈ ಮೂಲಕ ರೈತರು ಸದಾ ಬಳಕೆ ಮಾಡುವ ಎತ್ತಿನ ಗಾಡಿಯ ಸಂಕೇತವನ್ನು ಸೂಚಿಸುವಂತೆ ಚಿಹ್ನೆಯನ್ನು ಬದಲಾವಣೆ ಮಾಡಲಾಗುತ್ತದೆ ಎಂಬುದು ಸುದ್ದಿ.

ಪಕ್ಷದ ಹೊಸ ಚಿಹ್ನೆ ವಿನ್ಯಾಸ ಹೀಗೆಯೇ ಇರಲಿದೆಯೇ? ಎಂಬ ಕುರಿತು ಇನ್ನೂ ಯಾವ ನಾಯಕರು ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ ಸ್ವತಃ ದೇವೇಗೌಡರು ಪಕ್ಷದ ಚಿಹ್ನೆಯಲ್ಲಿ ಕೆಲವು ಬದಲಾವಣೆ ಮಾಡಲು ಸೂಚಿಸಿದ್ದಾರೆ ಎಂದು ನಾಯಕರೊಬ್ಬರು ಹೇಳಿದ್ದಾರೆ.

ಜನವರಿ 24ರಂದು ಹಾಸನದಲ್ಲಿ ಜೆಡಿಎಸ್ ಪಕ್ಷದ ಸಮಾವೇಶ ಆಯೋಜನೆ ಮಾಡಲಾಗಿದೆ. ಪಕ್ಷ ಪ್ರಭಾವ ಹೊಂದಿರುವ ಹಾಸನದಲ್ಲಿ ‘ಜನತಾ ಸಮಾವೇಶ’ ಹೆಸರಿನಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದ್ದು, ಈ ಸಮಾವೇಶದಲ್ಲಿಯೇ ಹೊಸ ಚಿಹ್ನೆ ಅನಾವರಣ ಮಾಡಲಾಗುತ್ತದೆಯೇ? ಎಂದು ಕಾದು ನೋಡಬೇಕಿದೆ.

ಪಕ್ಷದ ನಿಷ್ಠಾವಂತ ಕಾರ್ಯಕರ್ತರು, ನಾಯಕರು, ಮುಖಂಡರೇ ಬನ್ನಿ ಭಾಗವಹಿಸಿ. ಹಾಸನದಲ್ಲಿ ಹಮ್ಮಿಕೊಂಡಿರುವ ಪಕ್ಷ ಬೆಳ್ಳಿ ಹಬ್ಬದ ‘ಜನತಾ ಸಮಾವೇಶ’ವನ್ನು ಯಶಸ್ವಿಗೊಳಿಸೋಣ ಎಂದು ಪಕ್ಷ ಕರೆ ನೀಡಿದೆ.

ಜನತಾ ಸಮಾವೇಶ ಹಾಸನದಲ್ಲಿ ಜನವರಿ 24ರ ಶನಿವಾರ ಬೆಳಗ್ಗೆ 11.30ಕ್ಕೆ ಬಿಜಿಎಸ್‌ಕೆ ವಸತಿ ಬಡಾವಣೆ, ರಾಷ್ಟ್ರೀಯ ಹೆದ್ದಾರಿ 75, ಹಾಸನ ಇಲ್ಲಿ ನಡೆಯಲಿದೆ. ಸಾವಿರಾರು ಪಕ್ಷದ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಜೆಡಿಎಸ್ ಪಕ್ಷ ಈಗ ರಾಜ್ಯಮಟ್ಟಕ್ಕೆ ಸೀಮಿತವಾಗಿಲ್ಲ. ಕರ್ನಾಟಕದಲ್ಲಿ ಪಕ್ಷದ 18 ಶಾಸಕರಿದ್ದಾರೆ. 2024ರ ಲೋಕಸಭೆ ಚುನಾವಣೆಯ ಸಮಯಲ್ಲಿ ಪಕ್ಷ ಎನ್‌ಡಿಎ ಮೈತ್ರಿಕೂಟ ಸೇರಿದೆ. ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಗೆದ್ದ ಬಳಿಕ ಎಚ್.ಡಿ.ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಸಂಪುಟ ಸೇರಿದ್ದಾರೆ. ಅವರಿಗೆ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಹೊಣೆಯನ್ನು ನೀಡಲಾಗಿದೆ.

ಕರ್ನಾಟಕದಲ್ಲಿ ಮುಂಬರುವ ಜಿಬಿಎ, ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ಚಿಹ್ನೆಯನ್ನು ವಿನ್ಯಾಸ ಮಾಡಲಾಗುತ್ತಿದೆ. 2028ರ ವಿಧಾನಸಭೆ ಚುನಾವಣೆಯನ್ನು ಹೊಸ ಚಿಹ್ನೆಯ ಮೂಲಕವೇ ಎದುರಿಸಲು ಪಕ್ಷ ತಯಾರಿ ನಡೆಸಿದೆ.

ಎಚ್.ಡಿ.ಕುಮಾರಸ್ವಾಮಿ ರಾಷ್ಟ್ರ ರಾಜಕೀಯಕ್ಕೆ ಹೋದ ಮೇಲೆ ನಿಖಿಲ್ ಕುಮಾರಸ್ವಾಮಿ ರಾಜ್ಯಾದ್ಯಂತ ಸಂಚಾರ ಮಾಡಿ ಪಕ್ಷವನ್ನು ಸಂಘಟನೆ ಮಾಡುತ್ತಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮುಂದುವರೆಯಲಿದೆಯೇ? ಅಥವ ಎರಡೂ ಪಕ್ಷಗಳು ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆಯೇ? ಎಂಬುದು ಇನ್ನು ಅಂತಿಮವಾಗಿಲ್ಲ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular