ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿರುವ ಬೆನ್ನಲ್ಲೇ ಜೆಡಿಎಸ್ ಕೂಡ ಸಮರ ಸಾರಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಪೋಸ್ಟರ್ ಅಭಿಯಾನ ಆರಂಭಿಸಿದೆ.
ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಎಂಬ ಪೋಸ್ಟರ್ ಅಭಿಯಾನವನ್ನು ಜೆಡಿಎಸ್ ಆರಂಭಿಸಿದ್ದು, ಬೆಂಗಳೂರು ನಗರದ ವಿವಿಧ ಬಸ್ ನಿಲ್ದಾಣಗಳು, ಸಾರ್ವಜನಿಕ ಸ್ಥಳಗಳಲ್ಲಿ ಗೋಡೆಗಳ ಮೇಲೆ ಪೋಸ್ಟರ್ ಗಳನ್ನು ಅಂಟಿಸಿ ವಿನೂತನ ಪ್ರತಿಭಟನೆ ನಡೆಸಿದೆ.
ಪೋಸ್ಟರ್ ಜೊತೆಗೆ ಕ್ಯೂರ್ ಕೋಡ್ ಅಳವಡಿಕೆ ಮೂಲಕ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸಿದೆ. ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಿದ್ದು, ಜೆಡಿಎಸ್ ಬಿಜೆಪಿಯೊಂದಿಗೆ ಹೋರಾಟ ಮಾಡದೇ ಪ್ರತ್ಯೇಕವಾಗಿ ಹೋರಾಟ ನಡೆಸುತ್ತಿದ್ದು, ಇದೀಗ ಪೋಸ್ಟರ್ ಅಭಿಯಾನದ ಮೂಲಕ ಗಮನಸೆಳೆದಿದೆ.