HomeKarnatakaಬಿಡದಿ ಟೌನ್ ಶಿಪ್ ವಿರೋಧಿಸಿ ಬೆಂಗಳೂರಿನಲ್ಲಿ ಇಂದು ಜೆಡಿಎಸ್ ಧರಣಿ: ಫ್ರೀಡಂ ಪಾರ್ಕ್ ಸುತ್ತಮುತ್ತ ಸಂಚಾರ...

ಬಿಡದಿ ಟೌನ್ ಶಿಪ್ ವಿರೋಧಿಸಿ ಬೆಂಗಳೂರಿನಲ್ಲಿ ಇಂದು ಜೆಡಿಎಸ್ ಧರಣಿ: ಫ್ರೀಡಂ ಪಾರ್ಕ್ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ವಿರೋಧಿಸಿ ಜೆಡಿಎಸ್ ಮಂಗಳವಾರ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನ(ಫ್ರೀಡಂ ಪಾರ್ಕ್) ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ. ಆಗಸ್ಟ್ 18ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರತಿಭಟನೆ ನಡೆಸಲಿದ್ದು, ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಕೆಜಿ ರಸ್ತೆ ಮೂಲಕ ಮೈಸೂರು ಬ್ಯಾಂಕ್ ವೃತ್ತದಿಂದ ಬಲ ತಿರುವು ಪಡೆದು ಫ್ರೀಡಂ ಪಾರ್ಕ್ ಕಡೆಗೆ ಬರುವ ವಾಹನಗಳು ಕಡ್ಡಾಯವಾಗಿ ಪ್ಯಾಲೇಸ್ ರಸ್ತೆಯ ಮಹಾರಾಣಿ ಅಂಡರ್ ಪಾಸ್ ರಸ್ತೆ ಬಳಸುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫ್ರೀಡಂ ಪಾರ್ಕ್ ಜಂಕ್ಷನ್ ನಿಂದ ಕನಕದಾಸ ವೃತ್ತದ ಕಡೆಗೆ ಬರುವ ಮತ್ತು ಹೋಗುವ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಖೋಡೆ ಜಂಕ್ಷನ್ ಕಡೆಯಿಂದ ಕೆಆರ್ ಸರ್ಕಲ್ ಕಡೆಗೆ ಹೋಗುವ ವಾಹನ ಸವಾರರು ಫ್ಲೈಓವರ್ ರಸ್ತೆಯಲ್ಲಿ ತೆರಳಬಹುದು. ವಾಹನ ದಟ್ಟಣೆ ತಡೆಗಟ್ಟಲು ಹಳೆ ಜೆಡಿಎಸ್ ಕಚೇರಿ ರಸ್ತೆ ಬಳಸಬಹುದಾಗಿದೆ ಎಂದು ಹೇಳಲಾಗಿದೆ.

ಸುಬ್ಬಣ್ಣ ಜಂಕ್ಷನ್ ನಿಂದ ಎಂಟಿಆರ್ ಜಂಕ್ಷನ್ ಕಡೆಗೆ ಬರುವ ರಸ್ತೆಯು ಹಾಲಿ ಏಕಮುಖ ಸಂಚಾರ ರಸ್ತೆಯಾಗಿದ್ದು, ತಾತ್ಕಾಲಿಕವಾಗಿ ದ್ವಿಮುಖ ಸಂಚಾರ ರಸ್ತೆಯನ್ನಾಗಿ ಪರಿವರ್ತಿಸಲಾಗಿರುತ್ತದೆ, ಗಾಂಧಿನಗರದ ಕಡೆಗೆ ಬರುವ ವಾಹನಗಳು ಸದರಿ ರಸ್ತೆ ಬಳಸಬಹುದಾಗಿದೆ, ಖೋಡೆ ಜಂಕ್ಷನ್ ನಿಂದ ಮಹಾರಾಣಿ ಜಂಕ್ಷನ್ ವರೆಗೆ ವೈ. ರಾಮಚಂದ್ರ ರಸ್ತೆ ಮತ್ತು ಕಾಳಿದಾಸ ರಸ್ತೆ, ಪ್ಯಾಲೇಸ್ ರಸ್ತೆ, ಕೆಜಿ ರಸ್ತೆಯಲ್ಲಿ ಯಾವುದೇ ರೀತಿಯ ವಾಹನಗಳ ಪಾರ್ಕಿಂಗ್ ಗೆ ಅವಕಾಶ ಇರುವುದಿಲ್ಲ ಎಂದು ಸೂಚನೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular