HomeLatest Newsರಾಜ್ಯದಲ್ಲಿ ರಸಗೊಬ್ಬರ ಅಭಾವ: ಇಂದು ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಜೆಡಿಎಸ್ ಪ್ರತಿಭಟನೆ

ರಾಜ್ಯದಲ್ಲಿ ರಸಗೊಬ್ಬರ ಅಭಾವ: ಇಂದು ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ರಸಗೊಬ್ಬರ ಅಭಾವ ಶೀಘ್ರ ಬಗೆಹರಿಸುವಂತೆ ಒತ್ತಾಯಿಸಿ ಜೆಡಿಎಸ್ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ವೆಂಕಟರಾವ್ ನಾಡಗೌಡ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯದ ರಸಗೊಬ್ಬರ ಸಮಸ್ಯೆಯ ಕುರಿತು ಮನವರಿಕೆ ಮಾಡಿಕೊಟ್ಟಿಲ್ಲ. ಕೇಂದ್ರ ಸರ್ಕಾರ ರಸಗೊಬ್ಬರ ನೀಡಿಲ್ಲ ಎಂದು ಪತ್ರ ಬರೆದು ಕುಳಿತರೆ ಆಗುವುದಿಲ್ಲ. ಕೇಂದ್ರದ ಕಡೆ ಬೊಟ್ಟು ಮಾಡಿದರೆ ಸಮಸ್ಯೆ ಬಗ್ಗೆ ಹರಿಯುವುದಿಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಯೂರಿಯಾ, ಡಿಎಪಿ ರಸಗೊಬ್ಬರ ಅಭಾವ ತೀವ್ರವಾಗಿದೆ. ನೀರಾವರಿ ಪ್ರದೇಶದಲ್ಲಿ ಶೇಕಡ 80ರಷ್ಟು ನಾಟಿಯಾಗಿದ್ದು, ಗೊಬ್ಬರದ ಬೇಡಿಕೆ ಹೆಚ್ಚಾಗಿದೆ. ಕೇಂದ್ರ ಸರ್ಕಾರ 6.8 ಲಕ್ಷ ಮೆಟ್ರಿಕ್ ರಸಗೊಬ್ಬರವನ್ನು ರಾಜ್ಯಕ್ಕೆ ಕಳುಹಿಸಿದೆ ಎಂದು ಬಿಜೆಪಿ ಹೇಳುತ್ತಿದೆ. ಆದರೆ 5.27 ಲಕ್ಷ ಟನ್ ಮಾತ್ರ ನೀಡಿರುವುದಾಗಿ ರಾಜ್ಯ ಸರ್ಕಾರ ಹೇಳುತ್ತಿದ್ದು, ಕಾಳಸಂರೆಯಲ್ಲಿ ರಸಗೊಬ್ಬರ ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular