HomeKarnatakaಸೆ. 10 ಬೆಂಗಳೂರಿನಲ್ಲಿ ಜೆಡಿಎಸ್ ಬೃಹತ್ ಸಮಾವೇಶ

ಸೆ. 10 ಬೆಂಗಳೂರಿನಲ್ಲಿ ಜೆಡಿಎಸ್ ಬೃಹತ್ ಸಮಾವೇಶ

ಬೆಂಗಳೂರು: ಜೆಡಿಎಸ್ ಸಂಘಟನೆ ಬಲಪಡಿಸುವ ಉದ್ದೇಶದಿಂದ ಸೆಪ್ಟಂಬರ್ 10 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ.

ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಈ ಬಗ್ಗೆ ಮಾಹಿತಿ ನೀಡಿದ್ದು, ಸಮಾವೇಶದಲ್ಲಿ 20,000 ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ. ಎಲ್ಲಾ ಜಿಲ್ಲೆಗಳಿಂದಲೂ ಕಾರ್ಯಕರ್ತರು ಬರಬೇಕು ಎಂದು ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

91 ವರ್ಷ ವಯಸ್ಸಿನಲ್ಲಿಯೂ ಕೆಲಸ ಮಾಡುತ್ತಿದ್ದೇನೆ. ಯಾರೂ ನನ್ನನ್ನು ಕೈ ಬಿಡಬೇಡಿ ಎಂದು ಹೇಳಿದ ಅವರು, ಪ್ರಾದೇಶಿಕ ಪಕ್ಷ ಉಳಿಸುವುದು ನಮ್ಮ ಗುರಿಯಾಗಿದೆ. ಪಕ್ಷ ಸಂಘಟನೆ ದೃಷ್ಟಿಯಿಂದ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ನಾನು ಮನೆಯಲ್ಲಿ ಇರುವುದಿಲ್ಲ. ಪಕ್ಷ ಸಂಘಟನೆಗೊಳಿಸಿ ಉಳಿಸಲು ಕೆಲಸ ಮಾಡುತ್ತಿದ್ದೇನೆ. ರಾಷ್ಟ್ರೀಯ ಪಕ್ಷಗಳ ನಡುವೆ ಪ್ರಾದೇಶಿಕ ಪಕ್ಷ ಉಳಿಸುವ ಸಂಕಲ್ಪ ಮಾಡಿದ್ದೇನೆ. ಜಿ.ಟಿ. ದೇವೇಗೌಡರ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ ರಚನೆ ಮಾಡಿದ್ದು, ಸೆಪ್ಟೆಂಬರ್ 1ರಿಂದ ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular