HomeKarnatakaBIG NEWS : ಬೆಂಗಳೂರಲ್ಲಿ ಇಂದು 'ಜೆಡಿಎಸ್ ಬೆಳ್ಳಿ ಹಬ್ಬ' ಸಮಾವೇಶ : 1  ಲಕ್ಷಕ್ಕೂ...

BIG NEWS : ಬೆಂಗಳೂರಲ್ಲಿ ಇಂದು ‘ಜೆಡಿಎಸ್ ಬೆಳ್ಳಿ ಹಬ್ಬ’ ಸಮಾವೇಶ : 1  ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ!

ಬೆಂಗಳೂರು: ಜಾತ್ಯತೀತ ಜನತಾದಳ (JDS) ಪಕ್ಷವು ಅಸ್ತಿತ್ವಕ್ಕೆ ಬಂದು 25 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ, ಇಂದು (ಶನಿವಾರ, ಏಪ್ರಿಲ್ 11) ಬೆಂಗಳೂರಿನ ಕೊಮ್ಮಘಟ್ಟದ ಬಳಿ ಬೃಹತ್ ‘ಬೆಳ್ಳಿ ಹಬ್ಬ’ ಸಮಾವೇಶವನ್ನು ಆಯೋಜಿಸಲಾಗಿದೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಜಿಬಿಎ (GBA) ಚುನಾವಣೆಗಳ ಹಿನ್ನೆಲೆಯಲ್ಲಿ ಈ ಸಮಾವೇಶವು ಪಕ್ಷದ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗಲಿದೆ.

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ‘ಗ್ರೇಟರ್ ಬೆಂಗಳೂರು’ (GBA) ಚುನಾವಣೆಗೆ ದಿಕ್ಸೂಚಿಯಾಗಿ ಈ ಸಮಾವೇಶವನ್ನು ನಡೆಸಲಾಗುತ್ತಿದ್ದು, ರಾಜಧಾನಿಯಲ್ಲಿ ಪಕ್ಷದ ಅಸ್ತಿತ್ವ ಮತ್ತು ಸಂಘಟನೆಯನ್ನು ಬಲಪಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಬೆಂಗಳೂರಿನ ಸಮಾವೇಶಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಒಂದು ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಮತ್ತು ಬೆಂಬಲಿಗರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.ಮಾಜಿ ಪ್ರಧಾನಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ. ದೇವೇಗೌಡರು ಈ ಬೃಹತ್ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ಕೋರ್ ಕಮಿಟಿ ಅಧ್ಯಕ್ಷ ಕೃಷ್ಣಾರೆಡ್ಡಿ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಭಾಗವಹಿಸಲಿದ್ದಾರೆ.

ಚುನಾವಣಾ ದಿಕ್ಸೂಚಿ : 2028ರ ವಿಧಾನಸಭಾ ಚುನಾವಣೆಗೆ ಮುನ್ನ ನಡೆಯಲಿರುವ ಈ ಸಮಾವೇಶವು ಪಕ್ಷದ ಸಂಘಟನೆಗೆ ಹೊಸ ಚೈತನ್ಯ ತುಂಬಲಿದ್ದು, ಬೆಂಗಳೂರು ಅಭಿವೃದ್ಧಿಗೆ ದೇವೇಗೌಡರ ಕೊಡುಗೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಗುರಿ ಹೊಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂದಿನ ಯೋಜನೆ: ಬೆಂಗಳೂರಿನ ನಂತರ ತುಮಕೂರು ಸೇರಿದಂತೆ ರಾಜ್ಯದ ಎಂಟು ಪ್ರಮುಖ ಜಿಲ್ಲೆಗಳಲ್ಲಿ ಇಂತಹದ್ದೇ ಬೃಹತ್ ಸಮಾವೇಶಗಳನ್ನು ನಡೆಸಲು ಜೆಡಿಎಸ್ ಯೋಜನೆ ಹಾಕಿಕೊಂಡಿದೆ. ಸಮಾವೇಶದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, “ಈ ಸಮಾವೇಶವು ಹೊಸ ನಾಯಕತ್ವಕ್ಕೆ ಹೊಸ ಹುರುಪು ತುಂಬಲಿದೆ. ಬೆಂಗಳೂರಿನಲ್ಲಿ ಜೆಡಿಎಸ್ ಶಕ್ತಿ ಕುಂದಿದೆ ಎಂಬ ಟೀಕೆಗಳಿಗೆ ನಾಳೆಯ ಸಮಾವೇಶ ಉತ್ತರ ನೀಡಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಪ್ರಮುಖ ಶಾಸಕರು ಮತ್ತು ಮುಖಂಡರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.”ಜೆಡಿಎಸ್ ಕೇವಲ ಹಳೇ ಮೈಸೂರು ಭಾಗಕ್ಕೆ ಸೀಮಿತವಲ್ಲ, ಬೆಂಗಳೂರಿನಲ್ಲೂ ಪ್ರಬಲವಾಗಿದೆ” ಎಂಬ ಸಂದೇಶ ರವಾನಿಸಲು ದಳಪತಿಗಳು ಈ ವೇದಿಕೆಯನ್ನು ಬಳಸಿಕೊಳ್ಳಲಿದ್ದಾರೆ.ಸಮಾವೇಶಕ್ಕಾಗಿ ಕೊಮ್ಮಘಟ್ಟದ ಬಳಿ ಬೃಹತ್ ವೇದಿಕೆ ಮತ್ತು ಪೆಂಡಾಲ್ ಸಿದ್ಧಗೊಂಡಿದ್ದು, ವಾಹನ ನಿಲುಗಡೆ ಹಾಗೂ ಭದ್ರತೆಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಹಾಸನ ಸೇರಿದಂತೆ ರಾಜ್ಯದ ವಿವಿಧೆಡೆ ಬೆಳ್ಳಿ ಹಬ್ಬದ ಸಂಭ್ರಮ ಆಚರಿಸಿರುವ ಜೆಡಿಎಸ್, ಈಗ ಬೆಂಗಳೂರಿನಲ್ಲಿ ಬೃಹತ್ ಸಮಾವೇಶದ ಮೂಲಕ ರಾಜಕೀಯ ವಿರೋಧಿಗಳಿಗೆ ಪ್ರತ್ಯುತ್ತರ ನೀಡಲು ಮುಂದಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular