HomeKarnatakaBIG NEWS: ಭವಾನಿ ರೇವಣ್ಣಗೆ ಬಿಗ್ ಶಾಕ್: ಸ್ವರೂಪ್ ಗೆ ಹಾಸನ ಜೆಡಿಎಸ್ ಟಿಕೆಟ್ ಘೋಷಣೆ

BIG NEWS: ಭವಾನಿ ರೇವಣ್ಣಗೆ ಬಿಗ್ ಶಾಕ್: ಸ್ವರೂಪ್ ಗೆ ಹಾಸನ ಜೆಡಿಎಸ್ ಟಿಕೆಟ್ ಘೋಷಣೆ

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಗೊಂದಲ ಬಗೆಹರಿದಿದ್ದು, ಸ್ವರೂಪ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಈ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಗಾಗಿ ಬಿಗಿಪಟ್ಟು ಹಿಡಿದಿದ್ದ ಭವಾನಿ ರೇವಣ್ಣ ಅವರಿಗೆ ನಿರಾಸೆಯಾಗಿದೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಾಹಿತಿ ಹಂಚಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಹಾಸನ ಕ್ಷೇತ್ರದಿಂದ ಸ್ವರೂಪ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಹಾಸನದಲ್ಲಿ ಸ್ವರೂಪ್ ಅಭಿಮಾನಿಗಳು ಅವರನ್ನು ಹೆಗಲ ಮೇಲೆ ಹೊತ್ತುಕೊಂಡು ಸಂಭ್ರಮಿಸಿದ್ದಾರೆ. ಸಿಹಿ ತಿನ್ನಿಸಿ ಜೆಡಿಎಸ್ ಪಕ್ಷಕ್ಕೆ ಮತ್ತು ನಾಯಕರಿಗೆ ಜೈಕಾರ ಕೂಗಿದ್ದಾರೆ.

ಭವಾನಿ ರೇವಣ್ಣ ಅವರಿಗೆ ಹಾಸನ ಜೆಡಿಎಸ್ ಟಿಕೆಟ್ ಗಾಗಿ ಕೊನೆಯ ಕ್ಷಣದವರೆಗೂ ಹೆಚ್.ಡಿ. ರೇವಣ್ಣ ಅವರು ಮಾಡಿದ ಪ್ರಯತ್ನ ವಿಫಲವಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular