‘ಸುಳ್ಳುಪೊಳ್ಳುಗಳ ಸೌಧದ ಮೇಲೆ ನಿಂತಿರುವ ಕಾಂಗ್ರೆಸ್ ಗೆ ಅಸತ್ಯವೇ ಅಷ್ಟೈಶ್ವರ್ಯ’ : ಜೆಡಿಎಸ್ ವಾಗ್ಧಾಳಿ

ಬೆಂಗಳೂರು : ಆತ್ಮವಂಚನೆಯೇ ಅಧಿಕಾರದ ಮೂಲ ಬಂಡವಾಳ ಎಂದು ಜೆಡಿಎಸ್   ರಾಜ್ಯ ಸರ್ಕಾರದ ವಿರುದ್ಧ  ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದೆ.

ಬಾಳೆಗೊಂದು ಏಟು, ಬಾಳಿಗೊಂದು ಮಾತುʼ ಎನ್ನುವ ಮಾತಿದೆ. ಸುಳ್ಳುಪೊಳ್ಳುಗಳ ಸೌಧದ ಮೇಲೆ ನಿಂತಿರುವ ಕಾಂಗ್ರೆಸ್ ಪಕ್ಷಕ್ಕೆ ಅಸತ್ಯವೇ ಅಷ್ಟೈಶ್ವರ್ಯ! ಆತ್ಮವಂಚನೆಯೇ ಅಧಿಕಾರದ ಮೂಲ ಬಂಡವಾಳ!! ಮೂರ್ಖರಿಗೆ ಎಷ್ಟು ಹೇಳಿದರೂ ಅಷ್ಟೇ, ಅರ್ಥವೇ ಆಗುವುದಿಲ್ಲ ಎಂದು ಜೆಡಿಎಸ್ ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದೆ.

ಜೆಡಿಎಸ್ ಬಿಜೆಪಿ ಬಾಗಿಲಿಗೆ ಪದೇಪದೆ ಹೋಗುತ್ತದೆಂದು ಹಲ್ಲು ಗಿಂಜುವ ಕಾಂಗ್ರೆಸ್ಸಿಗರಿಗೆ; ಅದೇ ಬಿಜೆಪಿ ಜತೆ ಅಧಿಕಾರ ಅನುಭವಿಸಿದ ನಿತೀಶ್ ಕುಮಾರ್, ಮಮತಾ ಬ್ಯಾನರ್ಜಿ, ಸ್ಟಾಲಿನ್, ಉದ್ಧವಠಾಕ್ರೆ ಮನೆಗಳ ಸುತ್ತ ಗಿರಕಿ ಹೊಡೆಯಲು ಸಂಕೋಚವಿಲ್ಲ! ಗಂಗೆಯಲ್ಲಿ ಮಿಂದರೆ ಕಾಗೆ ಕೋಗಿಲೆ ಆಗುತ್ತದೆಯೇ ಕಾಮಾಲೆ ಕಣ್ಣಿನ ಕಾಂಗ್ರೆಸ್ಸಿಗರೇ? ಎಂದು ಜೆಡಿಎಸ್ ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದೆ.

ಪ್ರಜಾಪ್ರಭುತ್ವದಲ್ಲಿ ಮೈತ್ರಿ, ಹೊಂದಾಣಿಕೆ ಸಾಮಾನ್ಯ. ಆಯಾ ಸಂದರ್ಭಕ್ಕೆ ತಕ್ಕಂತೆ ಮೈತ್ರಿ ಆಗುತ್ತದೆ. ದೇಶ ವಿದೇಶದಲ್ಲೂ ಇದ್ದದ್ದೇ. ಆದರೆ, ನಮ್ಮ ಪಕ್ಷವನ್ನು ಬಿಜೆಪಿ ಬೀ ಟೀಂ ಎಂದು ಮೂದಲಿಸುವ ಕಾಂಗ್ರೆಸ್ಸಿಗೆ, ಸ್ವತಃ ತಾನೇ ಪ್ರಾದೇಶಿಕ ಪಕ್ಷಗಳ ಬಾಲಂಗೋಚಿ ಎನ್ನುವುದು ಮರೆತಿದೆ. ದುರದೃಷ್ಟಕ್ಕೆ ಇಂಥ ಜಾಣರೋಗಕ್ಕೆ ಮದ್ದಿಲ್ಲ ಎಂದು ಜೆಡಿಎಸ್ ಟ್ವೀಟ್ ನಲ್ಲಿ ಕಿಡಿಕಾರಿದೆ.

https://twitter.com/JanataDal_S/status/1705074172286955836

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read