HomeKarnatakaBIG NEWS: ದಳಪತಿಗಳಿಗೆ ಬಿಗ್ ಶಾಕ್: JDS ನ ಮತ್ತೊಂದು ವಿಕೆಟ್ ಪತನ

BIG NEWS: ದಳಪತಿಗಳಿಗೆ ಬಿಗ್ ಶಾಕ್: JDS ನ ಮತ್ತೊಂದು ವಿಕೆಟ್ ಪತನ

ತುಮಕೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಮುಂದಾಗುತ್ತಿದ್ದಂತೆ ಜೆಡಿಎಸ್ ನ ಹಲವು ಹಾಲಿ ಹಾಗೂ ಮಾಜಿ ಶಾಸಕರು ಬಹಿರಂಗ ಅಸಮಾಧಾನ ಹೊರ ಹಾಕಿದ್ದು, ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ದಳಪತಿಗಳಿಗೆ ಬಿಗ್ ಶಾಕ್ ಎದುರಾಗಿದೆ. ಜೆಡಿಎಸ್ ನ ಕೆಲ ಮುಖಂಡರು ಪಕ್ಷಕೆ ಗುಡ್ ಬೈ ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಘೋಷಿಸಿದ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಮುಖಂಡರು ಜೆಡಿಎಸ್ ತೊರೆಯಲು ಮುಂದಾಗಿದ್ದಾರೆ. ಈಗಾಗಲೇ ಪ್ರತ್ಯೇಕ ಸಭೆಗಳನ್ನು ನಡೆಸಿದ್ದು, ಮುಂದಿನ ನಿರ್ಧಾರಗಳ ಬಗ್ಗೆ ಚರ್ಚಿಸಿದ್ದಾರೆ. ಈ ಮಧ್ಯೆ ತುಮಕೂರು ಮಾಜಿ ಶಾಸಕ, ಅಲ್ಪಸಂಖ್ಯಾತ ಮುಖಂಡ ಶಫಿ ಅಹಮದ್ ಜೆಡಿಎಸ್ ಗೆ ರಾಜೀನಾಮೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೆಡಿಎಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಡಿಎಸ್ ತೊರೆದಿರುವ ಶಫಿ ಅಹಮದ್ ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular