ಬಿಹಾರದ ಜೆಹಾನಾಬಾದ್ ನಲ್ಲಿ ಜರುಗಿರುವ ಆಘಾತಕಾರಿ ಘಟನೆಯೊಂದರಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರು ಆಕ್ಷೇಪಾರ್ಹ ಕೃತ್ಯಗಳಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಶಿಕ್ಷಕ ಶಾಲೆಯಲ್ಲಿನ ಶಿಕ್ಷಕಿಯೊಂದಿಗೆ ಸಲ್ಲಾಪದಲ್ಲಿ ತೊಡಗಿದ್ದು ಸ್ವತಃ ವಿಡಿಯೋ ಚಿತ್ರೀಕರಿಸಿಕೊಂಡಿದ್ದಾರೆ. ಈ ವಿಡಿಯೋ ಜನರಲ್ಲಿ ಆಕ್ರೋಶ ಮೂಡಿಸಿದ್ದು, ಚರ್ಚೆಗೆ ಗ್ರಾಸವಾಗಿದೆ. ವಿಡಿಯೋ ವೈರಲ್ ಆದ ನಂತರ ಶಿಕ್ಷಣ ಇಲಾಖೆ ಡಿಪಿಒ ದಿನೇಶ್ ಪಾಸ್ವಾನ್ ಗಂಭೀರ ಕ್ರಮ ಕೈಗೊಂಡಿದ್ದಾರೆ. ಶಿಕ್ಷಕರನ್ನು ಗುರುತಿಸಲಾಗಿದ್ದು ಘಟನೆ ಬಗ್ಗೆ ಅವರನ್ನು ಪ್ರಶ್ನಿಸಲಾಗಿದೆ ಅವರ ಪ್ರತಿಕ್ರಿಯೆ ಅವಲಂಬಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಶಾಲೆಯ ಅಂಗಳದಲ್ಲಿ ಶಿಕ್ಷಕರ ಇಂತಹ ಕೃತ್ಯ ನಾಚಿಕೆಗೇಡಿನ ಕೆಲಸವಾಗಿದ್ದು ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ.
https://twitter.com/firstbiharnews/status/1833043054543982881?ref_src=twsrc%5Etfw%7Ctwcamp%5Etweetembed%7Ctwterm%5E1833043054543982881%7Ctwgr%5E23c7b466994a9