HomeKarnatakaಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರಂತ: ಕರೆಂಟ್ ಶಾಕ್ ಗೆ ಕಂಬದ ಮೇಲೆಯೇ ಕೊನೆಯುಸಿರೆಳೆದ ಹೊರಗುತ್ತಿಗೆ ನೌಕರ

ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರಂತ: ಕರೆಂಟ್ ಶಾಕ್ ಗೆ ಕಂಬದ ಮೇಲೆಯೇ ಕೊನೆಯುಸಿರೆಳೆದ ಹೊರಗುತ್ತಿಗೆ ನೌಕರ

ಯಾದಗಿರಿ: ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹೊರಗುತ್ತಿಗೆ ನೌಕರ ಬಲಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಗ್ರಾಮದಲ್ಲಿ ನಡೆದಿದೆ.

ವಿದ್ಯುತ್ ಲೈನ್ ದುರಸ್ತಿ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಹೊರಗುತ್ತಿಗೆ ನೌಕರ ಮೃತಪಟ್ಟಿದ್ದಾರೆ. ನಾಗಪ್ಪ ಕುಂಚಾರ (45) ಮೃತ ದುರ್ದೈವಿ. ಮಳೆಯಿಂದ ಮುರಿದುಬಿದ್ದ ವಿದ್ಯುತ್ ಕಂಬವನ್ನು ಜೋಡಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿ ಜೆಸ್ಕಾಂ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿದ್ದು, ಕಂಬದ ಮೇಲೆ ನಾಗಪ್ಪ ಕೆಂಚಾರ ಕೊನೆಯುಸಿರೆಳೆದಿದ್ದಾರೆ. ಕೆಂಭಾವಿ ಜೆಸ್ಕಾಂ ಉಪವಿಭಾಗದ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಮತ್ತೋರ್ವ ಹೊರಗುತ್ತಿಗೆ ನೌಕರ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಕಲಬುರ್ಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular