ಢಾಕಾ: ಢಾಕಾದ ಶಾಲೆಯ ಮೇಲೆ ವಾಯು ಸೇನೆ ತರಬೇತಿ ವಿಮಾನ ಪತನಗೊಂಡ ದುರಂತದಲ್ಲಿ 19 ಜನರು ಸಾವನ್ನಪ್ಪಿದ್ದಾರೆ. ಹಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಾಂಗ್ಲಾದೇಶದ ಢಾಕಾದಲ್ಲಿ F-7 ಜೆಟ್ ವಿಮಾನ ತರಬೇತಿ ನಡೆಸುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ಶಾಲೆಯ ಮೇಲೆ ಪತನಗೊಂಡಿದೆ. ವಿಮಾನ ದುರಂತದಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ವಿದ್ಯಾರ್ಥಿಗಳು ಸೇರಿ 19 ಜನರು ಮೃತಪಟ್ಟಿದ್ದಾರೆ. ಹಲವು ವಿದ್ಯಾರ್ಥಿಗಳು ಸುಟ್ಟ ಗಾಯಗಳಿಂದ ನರಳತ್ತಿದ್ದು, ಜೀವ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದ್ದಾರೆ.
ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸಾವು-ನೋವುಗಳು ಹೆಚ್ಚಾಗುವ ಸಾಧ್ಯತೆ ಇದೆ.