ದಾವಣಗೆರೆ : ಚಿನ್ನದ ವ್ಯಾಪಾರಿ ಬಳಿ ದರೋಡೆ ಮಾಡಿದ್ದ ಪಿಎಸ್ ಐ ಸೇರಿ ನಾಲ್ವರನ್ನ ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆಯ ಕೆಟಿಜೆ ನಗರದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನ ಪಿಎಸ್ಐ ಮಾಳಪ್ಪ ಚಿಪ್ಪಲಕಟ್ಟೆ, ಪ್ರವೀಣ್ ಕುಮಾರ್ ಎಂದು ಗುರುತಿಸಲಾಗಿದೆ. ಚಿನ್ನದಂಗಡಿಯ ಸಹ ಕೆಲಸಗಾರರ ಸತೀಶ್ ರೇವಣಕರ್, ನಾಗರಾಜ್ ರೇವಣಕರ್ ಎಂಬುವವರನ್ನು ಸಹ ಪೊಲೀಸರು ಬಂಧಿಸಿದ್ದಾರೆ.
ಕಾರವಾರ ಮೂಲದ ವ್ಯಾಪಾರಿ ವಿಶ್ವನಾಥ್ ಅರ್ಕಸಾಲಿ ಎಂಬವರು 80 ಗ್ರಾಂ ಬಂಗಾರದ ಒಡವೆಗಳನ್ನು ತೆಗೆದುಕೊಂಡು ದಾವಣಗೆರೆಯ ಬಸ್ ನಿಲ್ದಾಣಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ಮಾಳಪ್ಪ ಚಿಪ್ಪಲಕಟ್ಟಿ, ಪ್ರವೀಣ್ ಕುಮಾರ್ ಸೇರಿ ವ್ಯಾಪಾರಿಗೆ ಹೆದರಿಸಿದ್ದಾರೆ. ನಾವು ಐಜಿ ಸ್ಕ್ವಾಡ್ ಎಂದು ಹೇಳಿ. ಪೊಲೀಸ್ ಐಡಿ ಕಾರ್ಡ್, ನಕಲಿ ಗನ್ ತೋರಿಸಿ ಕೆಟಿಜೆ ನಗರ ಪೊಲೀಸ್ ಠಾಣೆಗೆ ಕಾರಿನಲ್ಲಿ ಕರೆದೊಯ್ದಿದ್ದರು. ನಂತರ ಪೊಲೀಸ್ ಠಾಣೆಯ ಒಳಗಡೆ ಹೋಗದೇ ವಾಪಸ್ ಕರೆತಂದಿದ್ದರು. ನಂತರ ವ್ಯಾಪಾರಿಯ ಬಳಿ ಇದ್ದ ಬಂಗಾರವನ್ನು ಕಸಿದುಕೊಂಡು ಎಸ್ಕೇಪ್ ಆಗಿದ್ದರು.
