ಉತ್ತರಪ್ರದೇಶದಲ್ಲಿ ವರದಿಯಾಗಿರುವ ಆತಂಕಕಾರಿ ಘಟನೆಯೊಂದರಲ್ಲಿ ಆಸ್ಪತ್ರೆಯಲ್ಲಿ ವೃದ್ಧನನ್ನು ಥಳಿಸಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಝಾನ್ಸಿಯ ಆಸ್ಪತ್ರೆಯಲ್ಲಿ ಗುಲಾಬ್ ಖಾನ್ ಎಂದು ಗುರುತಿಸಲಾದ ವೃದ್ಧನನ್ನು ಥಳಿಸಿ ಹಲ್ಲೆ ಮಾಡಲಾಗಿದೆ.
ತೀವ್ರ ಜ್ವರದಿಂದ ಬಳಲುತ್ತಿದ್ದ ಗುಲಾಬ್ ಖಾನ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು ಎನ್ನಲಾಗಿದೆ. ಈ ವೇಳೆ ಆಸ್ಪತ್ರೆಯ ಸಿಬ್ಬಂದಿಯೊಬ್ಬರು 60 ವರ್ಷದ ವ್ಯಕ್ತಿಯನ್ನು ಥಳಿಸಿದ್ದಾರೆ ಎಂದು ಹೇಳಲಾಗಿದೆ.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗುವುದಿಲ್ಲ ಎಂದು ವೃದ್ಧ ಹೇಳಿದ್ದನ್ನ ಕೇಳಿದ ವಾರ್ಡ್ ಬಾಯ್ ಅವರ ಮೇಲೆ ಹಲ್ಲೆ ಮಾಡಲು ಆರಂಭಿಸಿದರು ಎಂದು ಎಕ್ಸ್ ನಲ್ಲಿ ಸುದ್ದಿ ಹಂಚಿಕೊಂಡ ಪತ್ರಕರ್ತರೊಬ್ಬರು ತಿಳಿಸಿದ್ದಾರೆ.
ವೈರಲ್ ಕ್ಲಿಪ್‌ನಲ್ಲಿ ವಯಸ್ಸಾದ ರೋಗಿಯನ್ನು ಕಪಾಳಮೋಕ್ಷ ಮಾಡಿ ಆಸ್ಪತ್ರೆಯಿಂದ ಹೊರಹಾಕಲಾಗಿದೆ. ವಿಡಿಯೋ ಹೊರಬಿದ್ದ ಕೂಡಲೇ ಉತ್ತರ ಪ್ರದೇಶ ಪೊಲೀಸರು ಘಟನೆಯ ಬಗ್ಗೆ ಗಮನ ಹರಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
https://twitter.com/jhansipolice/status/1830285093480579405?ref_src=twsrc%5Etfw%7Ctwcamp%5Etweetembed%7Ctwterm%5E1830285093480579405%7Ctwgr%5E3f11531bac3ef9c6