ಉಚಿತ ವಿದ್ಯುತ್ ಮಿತಿ 125 ಯೂನಿಟ್ ಗೆ ಹೆಚ್ಚಳ: ಜಾರ್ಖಂಡ್ ಸಿಎಂ ಚಂಪೈ ಸೊರೆನ್

ರಾಂಚಿ: ಜಾರ್ಖಂಡ್ ಸರ್ಕಾರವು ಗ್ರಾಹಕರಿಗೆ ತಿಂಗಳಿಗೆ ಉಚಿತ ವಿದ್ಯುತ್ ಮಿತಿಯನ್ನು 100 ಯೂನಿಟ್‌ಗಳಿಂದ 125 ಯೂನಿಟ್‌ಗಳಿಗೆ ಹೆಚ್ಚಿಸಲು ಬುಧವಾರ ನಿರ್ಧರಿಸಿದೆ.

ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಚಂಪೈ ಸೊರೆನ್ ಈ ಕುರಿತು ಪ್ರಸ್ತಾವನೆ ಸಿದ್ಧಪಡಿಸುವಂತೆ ಇಂಧನ ಇಲಾಖೆಗೆ ಸೂಚಿಸಿದರು.

ಗ್ರಾಹಕರಿಗೆ ಈಗ ಅಸ್ತಿತ್ವದಲ್ಲಿರುವ 100 ಯೂನಿಟ್‌ಗಳ ಬದಲಿಗೆ 125 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಅಧಿಕೃತ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಜನರ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು 2022 ರಲ್ಲಿ ‘100-ಯೂನಿಟ್ ಉಚಿತ ವಿದ್ಯುತ್’ ಯೋಜನೆಯನ್ನು ಪ್ರಾರಂಭಿಸಿತು.

ಗೃಹ ಸಂಪರ್ಕಗಳಿಗೆ ತಿಂಗಳಿಗೆ 100 ಯೂನಿಟ್ ವಿದ್ಯುತ್ ಬಳಕೆಯವರೆಗೆ ಈ ಯೋಜನೆ ಅನ್ವಯವಾಗುತ್ತದೆ.

ಸಭೆಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸೋರೆನ್, ಆದಾಯವನ್ನು ಹೆಚ್ಚಿಸುವ ಪ್ರಯತ್ನಗಳನ್ನು ಮಾಡುವಂತೆ ನಾನು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read