ಉಪಚುನಾವಣೆಗೆ 2 ದಿನ ಮೊದಲು ಗುಂಡಿಕ್ಕಿ ಕಾಂಗ್ರೆಸ್ ನಾಯಕನ ಹತ್ಯೆ

ರಾಮಗಢ: ಜಿಲ್ಲೆಯಲ್ಲಿ ಉಪಚುನಾವಣೆಗೆ ಎರಡು ದಿನ ಬಾಕಿ ಇರುವಾಗ ಜಾರ್ಖಂಡ್‌ ನ ರಾಮ್‌ಗಢದಲ್ಲಿ 35 ವರ್ಷದ ಕಾಂಗ್ರೆಸ್ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ರಾಜ್ಯ ರಾಜಧಾನಿ ರಾಂಚಿಯಿಂದ ಸುಮಾರು 50 ಕಿಮೀ ದೂರದಲ್ಲಿರುವ ಸೌಂದ ಪ್ರದೇಶದ ಭುರ್ಕುಂದ-ಪತ್ರಾಟು ರಸ್ತೆಯಲ್ಲಿರುವ ಹಳೆಯ ಪೆಟ್ರೋಲ್ ಪಂಪ್ ಬಳಿ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಮೃತರನ್ನು ರಾಜ್ ಕಿಶೋರ್ ಬೌರಿ ಅಲಿಯಾಸ್ ಬಿಟ್ಕಾ ಬೌರಿ ಎಂದು ಗುರುತಿಸಲಾಗಿದ್ದು, ಅವರು ಬಾರ್ಕಗಾಂವ್‌ನ ಕಾಂಗ್ರೆಸ್ ಶಾಸಕ ಅಂಬಾ ಪ್ರಸಾದ್ ಅವರ ಪತ್ರಾಟು ಬ್ಲಾಕ್ ಪ್ರತಿನಿಧಿಯಾಗಿದ್ದರು. ಬೈಕ್‌ ನಲ್ಲಿ ಬಂದ ಮೂವರು ಕ್ರಿಮಿನಲ್‌ಗಳು ಪೆಟ್ರೋಲ್ ಪಂಪ್ ಬಳಿ ಬಂದು ಕುಳಿತಿದ್ದ ಬೌರಿ ಮೇಲೆ ಗುಂಡು ಹಾರಿಸಿದ್ದಾರೆ.

ಬೌರಿ ಅವರನ್ನು ಭುರ್ಕುಂಡದ ಸಿಸಿಎಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ. ನಾವು ಕೊಲೆಯ ತನಿಖೆಯನ್ನು ಪ್ರಾರಂಭಿಸಿದ್ದೇವೆ. ಅಪರಾಧದಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಕಂಡುಹಿಡಿಯಲು ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಭುರ್ಕುಂದ ಪೊಲೀಸ್ ಠಾಣೆಯ ಉಸ್ತುವಾರಿ ಅಮಿತ್ ಕುಮಾರ್ ಹೇಳಿದ್ದಾರೆ. ಶಾಸಕ ಅಂಬಾ ಪ್ರಸಾದ್ ಹಾಗೂ ಮಾಜಿ ಸಚಿವ ಯೋಗೇಂದ್ರ ಸಾ ಆಸ್ಪತ್ರೆಗೆ ತೆರಳಿ ಮಾಹಿತಿ ಪಡೆದುಕೊಂಡಿದ್ದಾರೆ. ರಾಮಗಢ ವಿಧಾನಸಭಾ ಕ್ಷೇತ್ರಕ್ಕೆ ಫೆಬ್ರವರಿ 27 ರಂದು ಉಪಚುನಾವಣೆ ನಡೆಯಲಿದ್ದು, ಮಾರ್ಚ್ 2 ರಂದು ಮತ ಎಣಿಕೆ ನಡೆಯಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read