HomeIndiaBREAKING: ಜಾರ್ಖಂಡ್ ಚುನಾವಣೆಗೆ ಬಿಜೆಯಿಂದ 66 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

BREAKING: ಜಾರ್ಖಂಡ್ ಚುನಾವಣೆಗೆ ಬಿಜೆಯಿಂದ 66 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ನವದೆಹಲಿ: ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) 66 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ.

ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರನ್ನು ಸರಿಕೆಲ್ಲಾ, ರಾಜ್ಯ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರನ್ನು ಧನ್ವರ್ ಮತ್ತು ಸೀತಾ ಸೊರೆನ್ ಅವರನ್ನು ಜಮ್ತಾರಾದಿಂದ ಕಣಕ್ಕಿಳಿಸಿದೆ. ಪಕ್ಷಾಂತರ ನಿಷೇಧ ಕಾಯ್ದೆಯಡಿ ಇತ್ತೀಚೆಗೆ ಅನರ್ಹಗೊಂಡಿರುವ ಶಾಸಕ ಲೋಬಿನ್ ಹೆಂಬ್ರೋಮ್ ಅವರಿಗೆ ಬೋರಿಯೊದಿಂದ ಟಿಕೆಟ್ ನೀಡಲಾಗಿದೆ.

ಚೈಬಾಸಾದಿಂದ ಗೀತಾ ಬಲ್ಮುಚು, ಜಗನಾಥಪುರದಿಂದ ಗೀತಾ ಕೋಡಾ ಮತ್ತು ಪೊಟ್ಕಾದಿಂದ ಮೀರಾ ಮುಂಡಾ ಅವರಿಗೆ ಪಕ್ಷ ಟಿಕೆಟ್ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಾರ್ಖಂಡ್ ವಿಧಾನಸಭಾ ಚುನಾವಣೆಯು ನವೆಂಬರ್ 13 ಮತ್ತು ನವೆಂಬರ್ 20 ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಮತಗಳ ಎಣಿಕೆ ನವೆಂಬರ್ 23 ರಂದು ನಡೆಯಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular