ತಡರಾತ್ರಿ ದುಷ್ಕರ್ಮಿಗಳ ಅಟ್ಟಹಾಸ: ಗುಂಡಿಕ್ಕಿ ಸಿಪಿಐ(ಎಂ) ಮುಖಂಡನ ಹತ್ಯೆ

ರಾಂಚಿ: ಜಾರ್ಖಂಡ್ ನ ರಾಂಚಿಯಲ್ಲಿ ಸ್ಥಳೀಯ ಸಿಪಿಐ(ಎಂ) ನಾಯಕ ಸುಭಾಷ್ ಮುಂಡಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಸ್ಥಳೀಯ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ ವಾದಿ), ಸಿಪಿಐ(ಎಂ) ಮುಖಂಡ ಸುಭಾಷ್ ಮುಂಡಾ ಅವರನ್ನು ರಾಂಚಿಯ ದಲಾದಲಿ ಪ್ರದೇಶದಲ್ಲಿ ಬುಧವಾರ ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗ್ರಾಮಾಂತರದ  ಎಸ್‌ಪಿ ನೌಶಾದ್ ಆಲಂ ಅವರು ಮಾಹಿತಿ ನೀಡಿ, ರಾಂಚಿಯ ದಲಾದಲಿ ಪ್ರದೇಶದಲ್ಲಿ ಸಿಪಿಐ(ಎಂ) ಮುಖಂಡ ಸುಭಾಷ್ ಮುಂಡಾ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಮುಂಡಾ ತನ್ನ ಕಚೇರಿಯಲ್ಲಿ ಕುಳಿತಿದ್ದ ವೇಳೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹೇಳಿದ್ದಾರೆ.

https://twitter.com/ANI/status/1684240955774484480

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read