HomeKarnatakaBREAKING: ಜಿಗಣಿ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

BREAKING: ಜಿಗಣಿ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಬೆಂಗಳೂರು: ಜಿಗಣಿಯ ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಹುನಗುಂಡ ತಾಲ್ಲೂಕಿನ ಇಳಕಲ್ ಮೂಲದ ಅಕ್ಷತಾ (30) ಅನುಮಾನಾಸ್ಪದವಾಗಿ ಸಾವನ್ನಪ್ಪಿದವರು. ಜೂನ್ 20 ರಂದು ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಮನೆಯ ಮಾಲೀಕ ಕಿಟಕಿ ತೆರೆದು ನೋಡಿದಾಗ ಅಕ್ಷತಾ ಶವವಾಗಿ ಪತ್ತೆಯಾಗಿದ್ದಾರೆ.

ಕೊಳೆತ ಸ್ಥಿತಿಯಲ್ಲಿ ಅಕ್ಷತಾ ಶವ ಕಂಡುಬಂದಿದೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕೇಸ್ ದಾಖಲಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿಸಿ ಸಾವು ಎಂದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular