ಮುಂದಿನ ತಿಂಗಳು ಜುಲೈ 5ಕ್ಕೆ ರಾಜ್ಯಾದ್ಯಂತ ಬಿಡುಗಡೆಗೆ ಸಜ್ಜಾಗಿರುವ ಪ್ರವೀಣ್ ತೇಜ್ ಅಭಿನಯದ ‘ಜಿಗರ್’ ಚಿತ್ರದ ಟ್ರೈಲರ್ ಇದೇ ಜೂನ್ 22ರಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಲಿದೆ. ಈ ಕುರಿತು ಚಿತ್ರತಂಡ ಇಂದು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದೆ.
ಸೂರಿ ಕುಂದಾರ್ ಅವರ ಚೊಚ್ಚಲ ನಿರ್ದೇಶನದ ಈ ಚಿತ್ರದಲ್ಲಿ ಪ್ರವೀಣ್ ತೇಜ್ ಹಾಗೂ ವಿಜಯಶ್ರೀ ಕಲ್ಬುರ್ಗಿ ಪ್ರಮುಖ ಪಾತ್ರದಲ್ಲಿದ್ದು, ಯುಕೆ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಪೂಜಾ ವಸಂತ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ರಿತ್ವಿಕ್ ಮುರಳಿದರ್ ಸಂಗೀತ ಸಂಯೋಜನೆ ನೀಡಿದ್ದು, ಜ್ಞಾನೇಶ್ ಬಿ ಮಾತಾಡ್ ಸಂಕಲನ, ಹಾಗೂ ಶಿವ ಸೇನಾ ಛಾಯಾಗ್ರಹಣವಿದೆ. ಇದೊಂದು ಆಕ್ಷನ್ ಲವ್ ಸ್ಟೋರಿ ಕಥಾ ಹಂದರ ಹೊಂದಿರುವ ಸಿನಿಮಾ ಎಂದು ಹೇಳಲಾಗಿದೆ.