HomeKarnatakaBIG NEWS: ಜಿಂದಾಲ್ ಕಾರ್ಖಾನೆಯಲ್ಲಿ ದುರಂತ; ನೀರಿನ ಹೊಂಡಕ್ಕೆ ಬಿದ್ದು ಮೂವರು ದುರ್ಮರಣ

BIG NEWS: ಜಿಂದಾಲ್ ಕಾರ್ಖಾನೆಯಲ್ಲಿ ದುರಂತ; ನೀರಿನ ಹೊಂಡಕ್ಕೆ ಬಿದ್ದು ಮೂವರು ದುರ್ಮರಣ

ಬಳ್ಳಾರಿ: ಜಿಂದಾಲ್ ಉಕ್ಕಿನ ಕಾರ್ಖಾನೆ ಬಳಿ ಇರುವ ನೀರಿನ ಹೊಂಡದಲ್ಲಿ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ತೋರಣಗಲ್ಲು ಬಳಿ ನಡೆದಿದೆ.

ಭುವನಹಳ್ಳಿ ಮೂಲದ ಜೆಡೆಪ್ಪ, ಬೆಂಗಳೂರು ಮೂಲದ ಸುಶಾಂತ, ಚೆನ್ನೈ ಮೂಲದ ಮಹಾದೇವನ್ ಮೃತ ದುರ್ವೈವಿಗಳು.

ನೀರಿನ ಹೊಂಡಕ್ಕೆ ಜೋಡಿಸಿದ್ದ ಪೈಪ್ ಲೈನ್ ನಲ್ಲಿ ಸಮಸ್ಯೆಯುಂಟಾಗಿತ್ತು. ಪೈಪ್ ರಿಪೇರಿ ಮಾಡಲೆಂದು ಮೂವರು ಹೋಗಿದ್ದಾರೆ. ಈ ವೇಳೆ ಪೈಪ್ ನಲ್ಲಿ ಬರುತ್ತಿದ್ದ ನೀರನ್ನು ನಿಲ್ಲಿಸದೇ ಹಾಗೇ ದುರಸ್ತಿ ಕಾರ್ಯ ಆರಂಭಿಸಿದ್ದಾರೆ. ನೀರಿನ ರಭಸಕ್ಕೆ ಚೆನ್ನೈ ಮೂಲದ ನೀರಿನ ಹೊಂಡಕ್ಕೆ ಬಿದ್ದಿದ್ದಾನೆ. ಆತನನ್ನು ರಕ್ಷಿಸಲು ಹೋಗಿ ಉಳಿದ ಇಬ್ಬರೂ ನೀರಿನಲ್ಲಿ ಮುಳುಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂವರು ನೀರಿನ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ತೋರಣಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular