ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಹಿರಿಯ ಸೇನಾಧಿಕಾರಿಗಳು, ಪೊಲೀಸ್ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ ನಾಗ್‌ ನಲ್ಲಿ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಸೇನೆಯ ಇಬ್ಬರು ಹಿರಿಯ ಅಧಿಕಾರಿಗಳು, ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ ಹಿರಿಯ ಪೊಲೀಸ್ ಹುತಾತ್ಮರಾಗಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಕರ್ನಲ್ ಮತ್ತು ಮೇಜರ್, ಜೆ & ಕೆ ಪೊಲೀಸ್‌ನ ಉಪ ಅಧೀಕ್ಷಕರು ಸಾವನ್ನಪ್ಪಿದ್ದಾರೆ.

ಹುತಾತ್ಮರನ್ನು ಭಾರತೀಯ ಸೇನೆಯ 19 ರಾಷ್ಟ್ರೀಯ ರೈಫಲ್‌ ನ ಕರ್ನಲ್ ಮನ್‌ ಪ್ರೀತ್ ಸಿಂಗ್, ಮೇಜರ್ ಆಶಿಶ್ ಧೋಂಚಕ್ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ಹಿಮನ್ಯುನ್ ಮುಜಾಮಿಲ್ ಭಟ್ ಎಂದು ಗುರುತಿಸಲಾಗಿದೆ.

ಭಯೋತ್ಪಾದಕರು ಅಡಗಿರುವ ಅನಂತನಾಗ್ ಜಿಲ್ಲೆಯ ಕೋಕೆರ್ನಾಗ್ ತೆಹಸಿಲ್‌ನ ಗಡೋಲ್ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ಭದ್ರತಾ ಪಡೆಗಳು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಗುಂಡಿನ ಚಕಮಕಿ ನಡೆದಿದೆ.

ನಿರ್ದಿಷ್ಟ ಗುಪ್ತಚರ ಆಧಾರದ ಮೇಲೆ ಪ್ರದೇಶದಲ್ಲಿ ಭಯೋತ್ಪಾದಕರನ್ನು ಹುಡುಕಲು ಹೋದ ನಂತರ ಸೇನಾ ಅಧಿಕಾರಿಗಳು ಮುಂಭಾಗದಿಂದ ಪಡೆಗಳನ್ನು ಮುನ್ನಡೆಸುತ್ತಿದ್ದರು ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

ಹುತಾತ್ಮರಾದ ಸೇನಾಧಿಕಾರಿಗಳು, ಪೊಲೀಸ್ ಅಧಿಕಾರಿಗಳಿಗೆ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಸಂತಾಪ ಸೂಚಿಸಿದ್ದಾರೆ.

https://twitter.com/OmarAbdullah/status/1701964729118265657

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read