HomeKarnatakaಕೆಪಿಎಸ್​ಸಿ ಅಕ್ರಮ: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್

ಕೆಪಿಎಸ್​ಸಿ ಅಕ್ರಮ: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್

ಬೆಂಗಳೂರು: ಕೆಪಿಎಸ್​ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಬಿಎನ್ಎಸ್ಎಸ್ ಸೆಕ್ಷನ್ 483ರ ಅಡಿ ಜಾಮೀನು ಕೋರಿ ಬೆಂಗಳೂರಿನ 52ನೇ ಸಿಸಿಹೆಚ್ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಕೋರ್ಟ್, ಸೆಪ್ಟೆಂಬರ್. 15ರೊಳಗೆ ಆಕ್ಷೇಪಣೆ ಸಲ್ಲಿಸಲು ಸಿಐಡಿ ಪರ ವಕೀಲರಿಗೆ ಸೂಚನೆ ನೀಡಿ ವಿಚಾರಣೆ ಸೆಪ್ಟೆಂಬರ್ 15ಕ್ಕೆ ಮುಂದೂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಕೆಪಿಎಸ್ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟು ಸ್ಫೋಟಕ ಮಾಹಿತಿಗಳು ಬಯಲಾಗುತ್ತಿವೆ. ಸಿಐಡಿ ಕಸ್ಟಡಿಯಲ್ಲಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಈಗಾಗಲೇ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ.

ಆರೋಪಿ ಬಸವರಾಜ್ ಕನ್ನಾಳೆ ಬಳಿ ಜ್ಞಾನೇಂದ್ರ ಕುಮಾರ್ ಲಕ್ಷಾಂತರ ರೂಪಾಯಿ ಹಣಪಡೆದುಕೊಂಡಿದ್ದರು ಎನ್ನಲಾಗಿದೆ. ಹಗರಣದ 26 ಲಕ್ಷ ರೂ. ಹಣದಲ್ಲಿ ಪ್ರಿಯತಮೆಗೆ ಜ್ಞಾನೇಂದ್ರ ಚಿನ್ನ ಗಿಫ್ಟ್ ನೀಡಿದ್ದರು. ಬೇನಾಮಿ ಖಾತೆಯೊಂದಕ್ಕೆ 38 ಲಕ್ಷ ರೂ. ಹಾಕಿಸಿಕೊಂಡಿದ್ದ ಅವರು ತನ್ನ ಹುಟ್ಟೂರಿನಲ್ಲಿ ಆಸ್ತಿ ಕೂಡ ಖರೀದಿಸಿದ್ದರು ಎಂದು ತಿಳಿದುಬಂದಿದೆ.

ಆದರೆ ಜ್ಞಾನೇಂದ್ರ ಕುಮಾರ್ ಗೆಳತಿ ಇಡಿ ವಿಚಾರಣೆ ವೇಳೆ ಚಿನ್ನದ ಸಾಲದ ಕಥೆ ಕಟ್ಟಿದ್ದಳು. ಜ್ಞಾನೇಂದ್ರ ಕುಮಾರ್ ಗಂಗ್ವಾರ್​ಗೆ ಸಾಲ ಕೊಟ್ಟಿದ್ದೆ. ಅದನ್ನು ಚಿನ್ನದ ರೂಪದಲ್ಲಿ ಹಿಂಪಡೆದಿದ್ದೆ. ಕೆಪಿಎಸ್​ಸಿ ಹಗರಣಕ್ಕೂ ಚಿನ್ನಕ್ಕೂ ಸಂಬಂಧವಿಲ್ಲ ಎಂದಿದ್ದಳು ಎನ್ನಲಾಗಿದೆ. ಒಟ್ಟಾರೆ ಕೆಪಿಎಸ್ ಸಿ ಹಗರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.

ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ ಬಯಲು

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್​ಸಿ) ಪಶುವೈದ್ಯಾಧಿಕರಿಗಳ ನೇಮಕಾತಿ ಹಗರಣದ ಬೆನ್ನಲ್ಲೇ ಮತ್ತೊಂದು ಅಕ್ರಮ ಬೆಳಕಿಗೆ ಬಂದಿದೆ. 2023ರಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರ (AWE) ಹುದ್ದೆಗಳ ನೇಮಕಾತಿಯಲ್ಲಿಯೂ ಕೋಟ್ಯಂತರ ರೂಪಾಯಿಗಳ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ಒಂದು ಎಡಬ್ಲ್ಯುಇ ಹುದ್ದೆಗೆ 2 ಕೋಟಿ ರೂಪಾಯಿಯಿಂದ 5 ಕೋಟಿ ರೂಪಾಯಿಗಳ ಡೀಲ್ ನಡೆದಿದೆ ಎಂದು ಹೇಳಲಾಗುತ್ತಿದೆ. ಪರೀಕ್ಷೆಯ ಒಎಂಆರ್ ಶೀಟ್‌ಗಳನ್ನು ತಿದ್ದುಪಡಿ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಎಫ್‌ಎಸ್‌ಎಲ್ ವರದಿಯು ತಿದ್ದುಪಡಿ ನಡೆದಿರುವುದನ್ನು ದೃಢಪಡಿಸಿದೆ.

24 ಅಭ್ಯರ್ಥಿಗಳ ಪೈಕಿ ಕನಿಷ್ಠ 10 ಮಂದಿ ಅಕ್ರಮ ಎಸಗಿರುವುದು ಸಾಬೀತಾಗಿದೆ. ಈ ಕುರಿತು ಕೆಪಿಎಸ್ ಸಿ ಆಂತರಿಕ ವರದಿ ಸಲ್ಲಿಸಿದ್ದರೂ, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿ, ಹಣ ಪಾವತಿಸಿ ಒಎಂಆರ್ ತಿದ್ದಿಸಿದ ಅಭ್ಯರ್ಥಿಗಳಿಗೆ ಪೋಸ್ಟಿಂಗ್ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಮೊದಲು, ಅಂದಿನ ಕೆಪಿಎಸ್​ಸಿ ಕಾರ್ಯದರ್ಶಿ ಲತಾ ಕುಮಾರಿ ನೇತೃತ್ವದಲ್ಲಿ ಆಂತರಿಕ ತನಿಖೆ ನಡೆದಿದ್ದು, ನಂತರ ವಿಜಯ್ ಕುಮಾರ್ ನೇತೃತ್ವದಲ್ಲಿ ಉಪಸಮಿತಿ ರಚಿಸಲಾಯಿತು. ಈ ಸಮಿತಿಯು ಎಫ್‌ಎಸ್‌ಎಲ್‌ಗೆ ಕಳುಹಿಸಿದ ದಾಖಲೆಗಳ ಪರಿಶೀಲನೆಯಲ್ಲಿ ಅಕ್ರಮ ದೃಢಪಟ್ಟಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular