HomeCrimeJNU ವಿದ್ಯಾರ್ಥಿನಿಗೆ ಮೋಸ; ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ

JNU ವಿದ್ಯಾರ್ಥಿನಿಗೆ ಮೋಸ; ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ

ನವದೆಹಲಿ: ಜೆಎನ್ ಯು ವಿದ್ಯಾರ್ಥಿನಿಯನ್ನು ನಂಬಿಸಿ ಮದುವೆಯಾಗುವುದಾಗಿ ಹೇಳಿ ಅತ್ಯಾಚಾರವೆಸಗಿರುವ ಘಟನೆ ಉತ್ತರ ದೆಹಲಿಯ ವಜೀರಾಬಾದ್ ನಲ್ಲಿ ನಡೆದಿದೆ.

ವಿದ್ಯಾರ್ಥಿನಿಯೊಬ್ಬಳಿಗೆ ಮದುವೆ ಮಾಡಿಕೊಳ್ಳುವುದಾಗಿ ಭರವಸೆ ನೀಡಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ವ್ಯಕ್ತಿ ಮೋಸ ಮಾಡಿದ್ದಾನೆ. ಆರೋಪಿ ದಕ್ಷಿಣ ದೆಹಲಿಯ ಜೆ ಎನ್ ಯು ಕ್ಯಾಂಪಸ್ ನ ನಿವಾಸಿಗಾದ್ದು, ಸುಮಾರು ನಾಲ್ಕು ವರ್ಷಗಳ ಹಿಂದೆ ಸಂಘಟನೆಯೊಂದರ ಮೂಲಕ ವಿದ್ಯಾರ್ಥಿನಿಯನ್ನು ಭೇಟಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಇಬ್ಬರ ನಡುವೆ ಪರಿಚಯ, ಸ್ನೇಹವಾಗಿ ಮದುವೆ ವಿಚಾರದವರೆಗೂ ಹೋಗಿದೆ. ಏಪ್ರಿಲ್ 3ರಂದು ವಿದ್ಯಾರ್ಥಿನಿಯನ್ನು ವಜೀರಾಬಾದ್ ನ ಫ್ಲಾಟ್ ಗೆ ಕರೆದೊಯ್ದ ಆರೋಪಿ ಮದುವೆಯಾಗುವುದಾಗಿ ಭರವಸೆ ನೀಡಿ ನಂಬಿಸಿದ್ದಾನೆ. ಬಳಿಕ ಆಕೆಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ್ದು, ಈಗ ಮದುವೆಯಾಗಲ್ಲ ಎಂದು ಉಲ್ಟಾ ಹೊಡೆದಿದ್ದಾನೆ.

ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ವಜೀರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿ ದೂರಿನ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಸಾಗರ್ ಸಿಂಗ್ ಕಲ್ಸಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular