ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ವ್ಯಾಪ್ತಿಯ ಅಂಗನವಾಡಿಗಳು ಕಂ ಕ್ರಷ್ ಕೇಂದ್ರಗಳಲ್ಲಿ ಖಾಲಿಯಿರುವ 20 ಕಾರ್ಯಕರ್ತೆಯರ ಹಾಗೂ 20 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ನಮೂನೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಆ.29 ರೊಳಗಾಗಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ದೂ.ಸಂ.: 08182-295110 ನ್ನು ಸಂಪರ್ಕಿಸುವಂತೆ ಶಿವಮೊಗ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವಿಶೇಷ ಘಟಕ ಯೋಜನೆ/ಗಿರಿಜನ ಉಪ ಯೋಜನೆಯಡಿ ಉದ್ದಿಮೆದಾರರಿಗೆ ನೆರವು : ಅರ್ಜಿ ಆಹ್ವಾನ
ಶಿವಮೊಗ್ಗ : ರಾಜ್ಯ ಸರ್ಕಾರವು ವಿಶೇಷ ಘಟಕ ಯೋಜನೆ/ಗಿರಿಜನ ಉಪ ಯೋಜನೆಯಡಿ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ. 60 ಸಹಾಯಧನ, ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಛಕ್ತಿ ಸಹಾಯಧನ ಯೋಜನೆಗಳಡಿ ಅರ್ಹ ಉದ್ದಿಮೆದಾರರಿಗೆ ನೆರವು ನೀಡಲು ಅರ್ಜಿ ಆಹ್ವಾನಿಸಿದೆ.
ಈಗಾಗಲೇ ಬ್ಯಾಂಕಿನಿಂದ ಸಾಲ ಪಡೆದು ಘಟಕಗಳನ್ನು ಸ್ಥಾಪಿಸಿರುವ ಅರ್ಹ ಉದ್ದಿಮೆದಾರರು ಹಾಗೂ ಬ್ಯಾಂಕ್ ಸಾಲ ಪಡೆದು ಉದ್ದಿಮೆ ಸ್ಥಾಪಿಸಲು ಇಚ್ಚಿಸಿರುವ ಉದ್ದಿಮೆದಾರರು ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ನೆಹರೂ ರಸ್ತೆ, ಶಿವಮೊಗ್ಗ ಇವರನ್ನು ಸಂಪರ್ಕಿಸುವಂತೆ ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

