HomeLatest NewsJOB ALERT : ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

JOB ALERT : ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಧಾರವಾಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹುಬ್ಬಳ್ಳಿ ಅಂಚಟಗೇರಿಯ ಡಾ|| ಎಪಿಜೆ ಅಬ್ದುಲ್ ಕಲಾಂ ವಸತಿ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ವಿವಿಧ ವಿಷಯಗಳನ್ನು ಇಂಗ್ಲೀಷ್ ಮಾಧ್ಯಮದಲ್ಲಿ ಬೋಧಿಸಲು ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಹಾಗೂ ಸೂಕ್ತ ವಿದ್ಯಾರ್ಹತೆವುಳ್ಳ ಅತಿಥಿ ಉಪನ್ಯಾಸಕರು ಜುಲೈ 15, 2026 ರೊಳಗಾಗಿ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0836-2971590 ಗೆ ಅಥವಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯಾಲಯವನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿವೇತನ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಧಾರವಾಡ :   2026-27 ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಶುಲ್ಕ ಮರುಪಾವತಿ ಯೋಜನೆಗಳಡಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ (1 ನೇ ರಿಂದ 8 ನೇ ತರಗತಿ) ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಸಪ್ಟೆಂಬರ್ 30, 2026 ರೊಳಗಾಗಿ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ: 0836-2971590, ಧಾರವಾಡ: 9738287549, ಹುಬ್ಬಳ್ಳಿ: 8867718261, ಕಲಘಟಗಿ: 9538912399, ಕುಂದಗೋಳ: 8904661872, ನವಲಗುಂದ: 8746894524 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಯೊಬ್ಬ ಮತಗಟ್ಟೆ ಅಧಿಕಾರಿಗೆ ಎರಡನೇ ಕಂತಿನ ಗೌರವಧನ

ಧಾರವಾಡ : ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ನೇದ್ದರ ಕಾರ್ಯವನ್ನು ಕೈಗೊಂಡಿರುವ ಜಿಲ್ಲೆಯ ಒಟ್ಟು 1,665 ಮತಗಟ್ಟೆ ಮಟ್ಟದ ಅಧಿಕಾರಿಗಳಿದ್ದು, ಪ್ರತಿಯೊಬ್ಬ ಮತಗಟ್ಟೆ ಅಧಿಕಾರಿಗೆ ಮೊದಲ ಕಂತಿನ ಗೌರವಧನ ನಾಲ್ಕು ಸಾವಿರ ರೂಪಾಯಿಯಂತೆ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ವಿತರಣೆ ಮಾಡಲಾಗಿರುತ್ತದೆ.

ಪ್ರತಿಯೊಬ್ಬ ಮತಗಟ್ಟೆ ಅಧಿಕಾರಿಗೆ ಎರಡನೇ ಕಂತಿನ ಗೌರವಧನ ರೂ.8,000 ರಂತೆ ವಿತರಣೆ ಮಾಡುವ ಕುರಿತು ಜುಲೈ 08, 2026 ರಂದು ಸಂಬಂಧಿಸಿದ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ವಿತರಣೆ ಮಾಡಲಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular