HomeLatest NewsJOB ALERT : ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ ಅರ್ಜಿ ಆಹ್ವಾನ

JOB ALERT : ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು :    ವಿಕಲಚೇತನರ  ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ 2025-26ನೇ ಸಾಲಿನ “ಗ್ರಾಮೀಣ ಪುನರ್ವಸತಿ ಯೋಜನೆಯಡಿ”ಯಲ್ಲಿ  ಬೆಂಗಳೂರು ದಕ್ಷಿಣ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಾದ  ಕೆ.ಗೊಲ್ಲಹಳ್ಳಿ, ಹೆಚ್. ಗೊಲ್ಲಹಳ್ಳಿ,  ಕಗ್ಗಲಿಪುರ,  ಅಗರ, ಯಲಹಂಕ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಯಾದ ದೊಡ್ಡಜಾಲ, ಬೆಂಗಳೂರು ಪೂರ್ವ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಯಾದ ಕೊಡತಿ ಮತ್ತು ಆನೇಕಲ್ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಯಾದ ಬನ್ನೇರುಘಟ್ಟ ಇಲ್ಲಿ ಖಾಲಿ  ಇರುವ  ಗ್ರಾಮೀಣ ಪುರ್ನವಸತಿ  ಕಾರ್ಯಕರ್ತರ (VRW)   ಹುದ್ದೆಗಳಿಗೆ  ಮಾಸಿಕ ಗೌರವಧನ  ಆಧಾರದಲ್ಲಿ  ನೇಮಕಾತಿ ಮಾಡಲು  ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳ ವಯೋಮಿತಿ 18 ರಿಂದ 45 ವರ್ಷದೊಳಗಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣ/ಅನುರ್ತೀಣರಾಗಿರಬೇಕು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (VRW) ಹುದ್ದೆಗೆ ಅಭ್ಯರ್ಥಿಯು ಸ್ಥಳೀಯವಾಗಿ ವಾಸವಿರಬೇಕು. ಸ್ಥಳೀಯವಾಗಿ ವಾಸಿಸುತ್ತಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.  ಶೇ.40ಕ್ಕಿಂತ ಹೆಚ್ಚು ಅಂಗವಿಕಲತೆಯನ್ನು ಹೊಂದಿರಬೇಕು (ಅಂಗವಿಕಲರ ಗುರುತಿನ ಚೀಟಿ ಪ್ರತಿಯನ್ನು ಲಗತ್ತಿಸಬೇಕು), ಭಾಗಶಃ ದೃಷ್ಠಿದೋಷವುಳ್ಳವರು, ಭಾಗಶಃ ಶ್ರವಣದೋಷವುಳ್ಳವರು, ದೈಹಿಕ ಅಂಗವಿಕಲರು ಮಾತ್ರ ಅರ್ಜಿ ಸಲ್ಲಿಸಬಹುದು.

ಆಸಕ್ತ ವಿಕಲಚೇತನರು, ಜಿಲ್ಲಾ ಅಂಗವಿಕರ  ಕಲ್ಯಾಣಾಧಿಕಾರಿಗಳ ಕಛೇರಿ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಹೊಸೂರು ರಸ್ತೆ, ಬೆಂಗಳೂರು-29 ಇಲ್ಲಿ ಸೆಪ್ಟೆಂಬರ್ 15, 2025ರ ಸಂಜೆ 5.00 ಗಂಟೆಯೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕರ  ಕಲ್ಯಾಣಾಧಿಕಾರಿಗಳ ಕಛೇರಿ ಅಥವಾ ದೂರವಾಣಿ ಸಂಖ್ಯೆ 080-29752324 ಗೆ ಸಂಪರ್ಕಿಸಬಹುದು ಎಂದು  ಬೆಂಗಳೂರು ನಗರ ಜಿಲ್ಲೆ,  ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular