JOB ALERT : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗದ : ಶಿವಮೊಗ್ಗದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಇದು ಬಿ ಇ, ಎಂ ಟೆಕ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್, ಟೆಲಿ ಕಮ್ಯುನಿಕೇಷನ್ ವಿಭಾಗದಲ್ಲಿ ಪದವಿ ಪಡೆದಿರುವ ಹಾಗೂ ಕನಿಷ್ಠ ಎರಡು ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳನ್ನು ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಯ ವಯೋಮಿತಿ ಗರಿಷ್ಠ 38 ವರ್ಷ ಇರಬೇಕು. ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆ ಕೇಂದ್ರದ ಪರಿಮಿತಿಗೆ ಒಳಪಟ್ಟಿರುತ್ತದೆ.

ಅರ್ಜಿಯನ್ನು ಸಲ್ಲಿಸಲು 27-01-2024 ಕೊನೆಯ ದಿನಾಂಕ ಆಗಿದ್ದು, ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂಬರ್ ಸಿಎ 38, ನಿದಿಗೆ ಇಂಡಸ್ಟ್ರಿಯಲ್ ಏರಿಯಾ, ಮಾಚೇನಹಳ್ಳಿ, ಶಿವಮೊಗ್ಗ ದೂ.ಸಂ: 08182-246054, 9448307027, 9902232839 ಸಂಪರ್ಕಿಸಬಹುದೆಂದು ಜಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read