HomeLatest NewsJOB ALERT : ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

JOB ALERT : ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ : ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಗೌರವಧನ ಆಧಾರದ ಮೇಲೆ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು 18 ರಿಂದ 45 ವರ್ಷ ವಯೋಮಾನದವರಾಗಿದ್ದು ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಹಾಗೂ ಕಂಪ್ಯೂಟರ್ ಜ್ಞಾನವುಳ್ಳ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ.31 ಕೊನೆಯ ದಿನವಾಗಿರುತ್ತದೆ.

ದಾವಣಗೆರೆ ತಾಲ್ಲೂಕು ಆಲೂರ ಹಟ್ಟಿ (ಶ್ರೀರಾಮನಗರ), ಹುಚ್ಚವ್ವನಹಳ್ಳಿ, ಹರಿಹರ ತಾಲ್ಲೂಕು ಉಕ್ಕಡಗಾತ್ರಿ ಮತ್ತು ಚನ್ನಗಿರಿ ತಾಲ್ಲೂಕಿನ ವಡ್ನಾಳು ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸವಿರುವ ವಿಕಲಚೇತನ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಜಿ ಹಾಗೂ ಇತರೆ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಛೇರಿ, ದೇವರಾಜ್ ಅರಸ್ ಬಡಾವಣೆ, ‘ಬಿ’ ಬ್ಲಾಕ್, ಶಿವಾಲಿ ಟಾಕೀಸ್ ಹತ್ತಿರ, ದಾವಣಗೆರೆ ದೂರವಾಣಿ:08192-263939 ಹಾಗೂ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ದಾವಣಗೆರೆ ಮೊ:9590829024, ಚನ್ನಗಿರಿ ತಾಲ್ಲೂಕು ಮೊ:9945738141 ಮತ್ತು ಹರಿಹರ ತಾಲ್ಲೂಕು ಮೊ:9945458058 ಇವರನ್ನು ಸಂಪರ್ಕಿಸಲು ಇಲಾಖೆಯ ಅಧಿಕಾರಿ.ಡಾ.ಕೆ.ಕೆ ಪ್ರಕಾಶ್.ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular