JOB ALERT : ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ದಿನಾಂಕ: 03-03-2025 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದ್ದು ವೆಬ್ಸೈಟ್ www.indiapostgdsonline.gov.in ಮೂಲಕವೇ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬೇಕು. ಎಲ್ಲಾ ಹುದ್ದೆಗಳಿಗೆ 10 ನೇ ತರಗತಿ ತೇರ್ಗಡೆ ಕಡ್ಡಾಯ. ಗಣಿತ ಮತ್ತು ಇಂಗ್ಲಿಷ್ನಲ್ಲಿ ಕನಿಷ್ಟ ತೇರ್ಗಡೆ ಅಂಕ ಹೊಂದಿರಬೇಕು. ಕನ್ನöಡವನ್ನು ಹತ್ತನೇ ತರಗತಿಯಲ್ಲಿ ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು. 18 ರಿಂದ 40 ವರ್ಷ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಶಿವಮೊಗ್ಗ ಅಂಚೆ ವಿಭಾಗದಲ್ಲಿ 36 ಹುದ್ದೆಗಳು ಖಾಲಿ ಇರುತ್ತವೆ. ಹೆಚ್ಚಿನ ಮಾಹಿತಿಗೆ ಆಯಾ ವಿಭಾಗದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು. ಶಿವಮೊಗ್ಗ ಅಂಚೆ ವಿಭಾಗದ ಸಂಪರ್ಕ ಸಂಖ್ಯೆ 08182-222516 ಆಗಿರುತ್ತದೆ ಎಂದು ಶಿವಮೊಗ್ಗ ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read