JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಡಿಕೇರಿ : ರಾಷ್ಟ್ರೀಯ ಆಯುಷ್ ಅಭಿಯಾನದ ಯೋಜನೆಯಡಿ ಕೊಡಗು ಜಿಲ್ಲಾ ಆಯುಷ್ ಇಲಾಖೆಯ ಪಾರಾಣೆ ಮತ್ತು ಶ್ರೀಮಂಗಲ ಆಯುಷ್ ಆರೋಗ್ಯ ಹಾಗೂ ಕ್ಷೇಮ ಕೇಂದ್ರಗಳಿಗೆ ಕಮ್ಯುನಿಟಿ ಹೆಲ್ತ್ ಆಫೀಸರ್ (ಸಿಎಚ್‍ಒ) ಹುದ್ದೆಗಳಿಗೆ ಹಾಗೂ ವಿರಾಜಪೇಟೆ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಖಾಲಿ ಇರುವ ಮಲ್ಟಿಪರ್ಪಸ್ ವರ್ಕರ್ ಹುದ್ದೆಯನ್ನು ಭರ್ತಿ ಮಾಡುವ ಸಂಬಂಧ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಜನವರಿ, 16 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಆಯುಷ್ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿ ಅವರು ಹಾಗೂ ಸಮಿತಿ ಸದಸ್ಯರ ಸಮ್ಮುಖದಲ್ಲಿ ನೇರ ಸಂದರ್ಶನ ನಡೆಯಲಿದೆ.

ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ನಿಗದತಿ ಸಮಯಕ್ಕೆ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಾಜರಾಗುವಂತೆ ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಆಯುಷ್ ಕಚೇರಿಯ ದೂ.ಸಂ.08272-295128 ಹಾಗೂ 8618442161 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಆಯುಷ್ ಅಧಿಕಾರಿ ಹಾಗೂ ಜಿಲ್ಲಾ ಆಯುಷ್ ಸಮಿತಿಯ ಸದಸ್ಯ ಕಾರ್ಯದರ್ಶಿ ಡಾ.ರೇಣುಕಾದೇವಿ ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read