ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜು.07 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಶನದಲ್ಲಿ ಆದಿತ್ಯ ಬಿರ್ಲಾ ಕ್ಯಾಪಿಟಲ್ ಪ್ರೈ.ಲಿ., ಇಂಡಸ್ ಸಂಡ್ ಬ್ಯಾಂಕ್ ಪ್ರೈ.ಲಿ., ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಯಾವುದೇ ಡಿಗ್ರಿ ಪೂರೈಸಿದ, 18 ರಿಂದ 35 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.
ಯುವನಿಧಿ ಫಲಾನುಭವಿಗಳ ಸ್ವಯಂ ಘೋಷಣೆ ಕಡ್ಡಾಯ
ಶಿವಮೊಗ್ಗ : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ಅನುಷ್ಠಾನಗೊಳಿಸುವ ಭಾಗವಾಗಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯು ದಿ:26-12-2023 ರಂದು ಆರಂಭವಾಗಿದ್ದು, ಜಿಲ್ಲೆಯ ಫಲಾನುಭವಿಗಳು ತ್ರೈಮಾಸಿಕ ಬದಲಾಗಿ ಪ್ರತಿ ತಿಂಗಳು 25 ರೊಳಗೆ ಕಡ್ಡಾಯವಾಗಿ ಆನ್ ಲೈನ್ ಪೋರ್ಟಲ್‌ನಲ್ಲಿ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು. ನೀಡದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮೆಯಾಗುವುದಿಲ್ಲ.
2025 ರಲ್ಲಿ ಪದವಿ/ಡಿಪ್ಲೋಮೋ ಪಡೆದ ಪದವೀಧರರು, ಪದವಿ ಪಡೆದು 6 ತಿಂಗಳಾದರೂ ಉದ್ಯೋಗ ಪಡೆಯದ ನಿರುದ್ಯೋಗಿಗಳು, ಸೇವಾ ಸಿಂಧು ಪೋರ್ಟಲ್‌ಗೆ ಬೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ಪದವೀಧರರಿಗೆ ರೂ.3,000/- ಹಾಗೂ ಡಿಪ್ಲೋಮೋ ಪದವೀಧರರಿಗೆ ರೂ.1,500/- ನೀಡಲಾಗುವುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

