JOB ALERT : ಪತ್ರಿಕೋದ್ಯಮ ಪದವೀಧರರೇ ಗಮನಿಸಿ : ಆಕಾಶವಾಣಿಯಲ್ಲಿ ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಆಕಾಶವಾಣಿ ಬೆಂಗಳೂರು ನಿಲಯದ ಪ್ರಾದೇಶಿಕ ಸುದ್ದಿ ವಿಭಾಗವು ಶಿವಮೊಗ್ಗ ಜಿಲ್ಲೆಗೆ ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಪಿ.ಜಿ. ಡಿಪ್ಲೊಮಾ/ಪತ್ರಿಕೋದ್ಯಮ/ಸಮೂಹ ಮಾಧ್ಯಮದಲ್ಲಿ ಪದವಿ ಹೊಂದಿದವರು ಕನಿಷ್ಠ ಎರಡು ವರ್ಷಗಳ ಮಾಧ್ಯಮ ಅನುಭವ ಉಳ್ಳವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ 24 ರಿಂದ 45 ವರ್ಷಗಳಾಗಿದ್ದು, ಆಸಕ್ತಿ ಉಳ್ಳವರು ತಮ್ಮ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಅಂಚೆ ವಿಳಾಸ: ಸುದ್ದಿ ವಿಭಾಗದ ಮುಖ್ಯಸ್ಥರು, ಆಕಾಶವಾಣಿ ನಿಲಯ, ರಾಜಭವನ ರಸ್ತೆ, ಬೆಂಗಳೂರು ಇಲ್ಲಿಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-22356344 ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read