JOB ALERT : ವೈದ್ಯಕೀಯ ಸಿಬ್ಬಂದಿಗಳ ನೇಮಕಾತಿಗೆ ನ.22 ಮತ್ತು 23 ರಂದು ನೇರ ಸಂದರ್ಶನ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಿವಿಧ ಆಸ್ಪತ್ರೆಗಳಲ್ಲಿಅವಶ್ಯಕತೆಗನುಗುಣವಾಗಿ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞ ವೈದ್ಯರು, ಎ.ಮ್.ಬಿ.ಬಿ.ಎಸ್. ವೈದ್ಯರು ಹಾಗೂ ಸಾಮಾನ್ಯ ವೈದ್ಯರು, ಅರವಳಿಕೆ ತಜ್ಞರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳು, ಎಲ್.ಡಿ.ಸಿ., ಡೇಸ್ಟರ್, ವಾರ್ಡಬಾಯ್, ಆಯಾ ಮತ್ತು ಅಂಬ್ಯೂಲೆನ್ಸ್ ವಾಹನ ಚಾಲಕರುಗಳ ಹುದ್ದೆಗೆ ಮಾಸಿಕ ಗೌರವಧನ ಆಧಾರದ ಮೇಲೆ ಹನ್ನೊಂದು ತಿಂಗಳ ಅವಧಿಗೆ ಸೇವೆಯನ್ನು ಪಡೆದುಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಿವಿಧ ಆಸ್ಪತ್ರೆಗಳಲ್ಲಿ ಅವಶ್ಯಕತೆಗನುಗುಣವಾಗಿ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞರು ಎಮ್.ಬಿ.ಬಿ.ಎಸ್. ಸಾಮಾನ್ಯ ವೈದ್ಯರು, ಹಾಗೂ ಅರೇ ವೈದ್ಯಕೀಯ ಸಿಬ್ಬಂದಿಗಳನ್ನು ಹನ್ನೊಂದು ತಿಂಗಳ ಅವಧಿಗೆ ಮಾಸಿಕ ಗೌರವಧನ ಆಧಾರದ ಮೇಲೆ ಸೇವೆಯನ್ನು ಪಡೆದುಕೊಳ್ಳಲು ಉದ್ದೇಶಿಸಲಾಗಿದೆ.

ಈ ಹುದ್ದೆಗಳಿಗೆ ಸಂಬಂಧಪಟ್ಟ ವಿದ್ಯಾರ್ಹತೆ ಹೊಂದಿದ ಆಸಕ್ತಿವುಳ್ಳ ಅಭ್ಯರ್ಥಿಗಳು ತಮ್ಮ ಮೂಲ ಹಾಗೂ ದೃಡೀಕೃತ ಸರ್ಟಿಫಿಕೇಟಗಳೊಂದಿಗೆ ನವೆಂಬರ್ 7 ರಿಂದ 18, 2023 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹು.ಧಾ.ಮ.ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆ ಆಡಳಿತ ಕಛೇರಿ ನಂ.14ರಲ್ಲಿ ದ್ವಿತೀಯ ದರ್ಜೆ ಸಹಾಯಕರ ಹತ್ತಿರ ಹೆಸರು ನೊಂದಾಯಿಸಿಕೊಳ್ಳಬಹುದು.

ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗುವುದು. ನವೆಂಬರ್ 22, 2023 ರಂದು ವೈದ್ಯರು ಮತ್ತು ಅರೇ ವೈದ್ಯಕೀಯ ಸಿಬ್ಬಂದಿಗಳಿಗೆ ಮತ್ತು ನವೆಂಬರ್ 23, 2023 ರಂದು ಎಲ್.ಡಿ.ಸಿ., ಡೇಸ್ಸರ್, ವಾರ್ಡಬಾಯ್, ಆಯಾ ಮತ್ತು ಅಂಬ್ಯೂಲೆನ್ಸ್ ವಾಹನ ಚಾಲಕರಿಗೆ ನೇರ ಸಂದರ್ಶನವನ್ನು ನಡೆಸಲಾಗುತ್ತಿದೆ.ಹೆಚ್ಚಿನ ವಿವರಗಳನ್ನು www.hdmc.mrc.gov.in ವೆಬ್ಸೈಟನಲ್ಲಿ ಪಡೆದುಕೊಳ್ಳಬಹುದು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read