HomeKarnatakaJOB ALERT : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 6,715 ಬ್ಯಾಂಕ್ ಹುದ್ದೆಗಳಿಗೆ ಅರ್ಜಿ...

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 6,715 ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ|IBPS PO Recruitment 2026

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನಲ್ ಸೆಲೆಕ್ಷನ್ (IBPS) ದೇಶದ ವಿವಿಧ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಪ್ರೊಬೇಷನರಿ ಆಫೀಸರ್ (PO) ಹಾಗೂ ಮ್ಯಾನೇಜ್‌ಮೆಂಟ್ ಟ್ರೈನಿ (MT) ಹುದ್ದೆಗಳ ಭರ್ತಿಗೆ ಭಾರೀ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಈ ನೇಮಕಾತಿಯಡಿ ಬ್ಯಾಂಕ್ ಆಫ್ ಬರೋಡಾ, ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಸೇರಿದಂತೆ ಹಲವು ಬ್ಯಾಂಕ್‌ಗಳಲ್ಲಿ ಒಟ್ಟು 6,715 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಜುಲೈ 1, 2026ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ

  • ಬ್ಯಾಂಕ್ ಆಫ್ ಬರೋಡಾ – 1,900 ಹುದ್ದೆಗಳು
  • ಬ್ಯಾಂಕ್ ಆಫ್ ಇಂಡಿಯಾ – 500 ಹುದ್ದೆಗಳು
  • ಬ್ಯಾಂಕ್ ಆಫ್ ಮಹಾರಾಷ್ಟ್ರ – 1,100 ಹುದ್ದೆಗಳು
  • ಕೆನರಾ ಬ್ಯಾಂಕ್ – 1,500 ಹುದ್ದೆಗಳು
  • ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ – 500 ಹುದ್ದೆಗಳು
  • ಇಂಡಿಯನ್ ಓವರ್‌ಸೀಸ್ ಬ್ಯಾಂಕ್ – 550 ಹುದ್ದೆಗಳು
  • ಪಂಜಾಬ್ ನ್ಯಾಷನಲ್ ಬ್ಯಾಂಕ್ – 504 ಹುದ್ದೆಗಳು
  • ಪಂಜಾಬ್ ಅಂಡ್ ಸಿಂಧ್ ಬ್ಯಾಂಕ್ – 161 ಹುದ್ದೆಗಳು

ವಿದ್ಯಾರ್ಹತೆ

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ (Degree) ಪಡೆದಿರಬೇಕು.

ವಯೋಮಿತಿ

  • ಕನಿಷ್ಠ: 20 ವರ್ಷ
  • ಗರಿಷ್ಠ: 30 ವರ್ಷ

ವಯೋಸಡಿಲಿಕೆ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  • ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ – 5 ವರ್ಷ
  • ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
  • ದಿವ್ಯಾಂಗ (PwBD) ಅಭ್ಯರ್ಥಿಗಳಿಗೆ – 10 ವರ್ಷ (ನಿಯಮಾನುಸಾರ)

ಅರ್ಜಿ ಸಲ್ಲಿಸುವ ಅವಧಿ

  • ಆರಂಭ: ಜುಲೈ 1, 2026
  • ಕೊನೆಯ ದಿನಾಂಕ: ಜುಲೈ 21, 2026

ಅರ್ಜಿ ಶುಲ್ಕ

  • ಎಸ್‌ಸಿ / ಎಸ್‌ಟಿ / PwBD ಅಭ್ಯರ್ಥಿಗಳು: ₹175
  • ಸಾಮಾನ್ಯ / ಇತರೆ ಅಭ್ಯರ್ಥಿಗಳು: ₹850

ಆಯ್ಕೆ ಪ್ರಕ್ರಿಯೆ

ಅಭ್ಯರ್ಥಿಗಳ ಆಯ್ಕೆ ಈ ಹಂತಗಳ ಆಧಾರದ ಮೇಲೆ ನಡೆಯಲಿದೆ:

  • ಪ್ರಿಲಿಮಿನರಿ (Preliminary) ಆನ್‌ಲೈನ್ ಪರೀಕ್ಷೆ
  • ಮುಖ್ಯ (Main) ಪರೀಕ್ಷೆ
  • ಪರ್ಸನಾಲಿಟಿ ಟೆಸ್ಟ್
  • ಸಂದರ್ಶನ (Interview)

ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಬಂಧಿತ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಪ್ರೊಬೇಷನರಿ ಆಫೀಸರ್ ಹಾಗೂ ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಲ್ಲಿ ನೇಮಕಾತಿ ಮಾಡಲಾಗುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ IBPS ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ, ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular