
ಅರ್ಜಿಯನ್ನು ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ https://kodagu.dcourts.gov.in/notice-category/recruitments/ ರಲ್ಲಿ ನೀಡಲಾದ ಲಿಂಕ್ ಮೂಲಕ ಆನ್ಲೈನ್ನಲ್ಲಿ ಡಿಸೆಂಬರ್, 10 ರ ರಾತ್ರಿ 11.59 ಗಂಟೆಯೊಳಗೆ ಸಲ್ಲಿಸಬೇಕು. ಮತ್ತು ಪೂರ್ಣ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ಪಾವತಿಸಲು ಡಿಸೆಂಬರ್, 11 ಕೊನೆಯ ದಿನವಾಗಿದೆ. ಆನ್ಲೈನ್ ಹೊರತುಪಡಿಸಿ, ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ, ಮಡಿಕೇರಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಚ್.ಸಿ.ಶಾಮ್ ಪ್ರಸಾದ್ ಅವರು ತಿಳಿಸಿದ್ದಾರೆ.

