HomeKarnatakaJOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 1500 ಗ್ರಾಮ ಲೆಕ್ಕಾಧಿಕಾರಿ, 357...

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 1500 ಗ್ರಾಮ ಲೆಕ್ಕಾಧಿಕಾರಿ, 357 ಸರ್ವೇಯರ್ ಹುದ್ದೆಗಳ ನೇಮಕಾತಿ

ಬೆಂಗಳೂರು : ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ 1500 ಗ್ರಾಮ ಲೆಕ್ಕಾಧಿಕಾರಿ, 357 ಸರ್ವೇಯರ್ ಹುದ್ದೆಗಳ ನೇಮಕಾತಿ ನಡೆಯಲಿದೆ.

ಹೌದು. ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1,500 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು. ಜೊತೆಗೆ 357 ಸರ್ವೆಯರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೂಡ ನಡೆಯಲಿದೆ. ಇನ್ನೂ 590 ಹುದ್ದೆಗಳ ನೇಮಕಾತಿಗೆ ಸಂಪುಟ ಸಭೆಯಲ್ಲಿ ಅನುಮತಿ ಪಡೆಯಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುತ್ತದೆ. ಇದಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗುತ್ತದೆ, ನೇಮಕಗೊಂಡ 750 ಸರ್ವೆಯರ್ಗಳಿಗೆ ತರಬೇತಿ ಕೊಡಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ಅರ್ಜಿ ಸಲ್ಲಿಸುವ ಸಂಬಂಧ ನೀವು ತಯಾರಿ ಮಾಡಿಕೊಳ್ಳಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular