JOB ALERT : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಮೇ 27 ರಂದು ಈ ಜಿಲ್ಲೆಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಮೇ 27 ರಂದು ( ನಾಡಿದ್ದು_) ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ.

ಈ ಮೇಳದಲ್ಲಿ 4 ರಿಂದ 5 ಕಂಪನಿಗಳು ಭಾಗವಹಿಸುತ್ತಿದ್ದು, ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು. ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ (RESUME) ಗಳೊಂದಿಗೆ ಹಳೆಯ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಅಂದು ನಡೆಯುವ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 8277000619 ಗೆ ಸಂಪರ್ಕಿಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read