ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಭದ್ರಾವತಿ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ 19 ಕಾರ್ಯಕರ್ತೆಯರು ಮತ್ತು 59 ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ವೆಬ್ಸೈಟ್ https://karnemakaone.kar.nic.in/abcd/ ಮೂಲಕ ಡಿ. 15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಭದ್ರಾವತಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಮೇಲಿನ ವೆಬ್ಸೈಟ್ ಅಥವಾ ಭದ್ರಾವತಿ ತಾಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.
