HomeKarnatakaJOB ALERT : ಜೂನ್ 10 ರಂದು ಉದ್ಯೋಗ/ಶಿಶುಕ್ಷ ಮೇಳ

JOB ALERT : ಜೂನ್ 10 ರಂದು ಉದ್ಯೋಗ/ಶಿಶುಕ್ಷ ಮೇಳ

ಇಲ್ಲಿನ ರೇಡಿಯೋ ಪಾರ್ಕ್ನಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ವತಿಯಿಂದ ಜೂನ್ 10 ರಂದು ಬೆಳಿಗ್ಗೆ 10 ಗಂಟೆಗೆ ಸಂಸ್ಥೆಯ ಆವರಣದಲ್ಲಿ ಉದ್ಯೋಗ/ಶಿಶುಕ್ಷ  ಮೇಳ ಹಮ್ಮಿಕೊಳ್ಳಲಾಗಿದೆ.

ಈ ಮೇಳದಲ್ಲಿ ಬಳ್ಳಾರಿ ಜಿಲ್ಲೆಯ ಪ್ರತಿಷ್ಠಿತ ಕೈಗಾರಿಕೆಗಳು ಹಾಗೂ ಬೆಂಗಳೂರಿನ ಪ್ರಮುಖ ಕಂಪನಿಗಳು ಭಾಗವಹಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ. ಐಟಿಐ ತೇರ್ಗಡೆಯಾದ ಹಾಗೂ ಪ್ರಸಕ್ತ ಸಾಲಿನ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.9741183501, 7676161097 ಗೆ ಸಂಪರ್ಕಿಸಬಹುದಾಗಿದೆ.

ಬಳ್ಳಾರಿ ಜಿಲ್ಲೆ ಹಾಗೂ ಸುತ್ತಮುತ್ತಲಿನ ಐಟಿಐ ವಿದ್ಯಾರ್ಥಿಗಳು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ಕೋರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ  :   ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2026-27ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ಗಳಾದ ಪಿ.ಯು.ಸಿ., ಡಿಪ್ಲೋಮಾ ಹಾಗೂ ಐ.ಟಿ.ಐ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮಾತ್ರ ಈ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆಯಲು ಅವಕಾಶವಿರುತ್ತದೆ.ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾAಶದ (ಸ್ಟೇಟ್ ಹಾಸ್ಟೆಲ್ ಪೋರ್ಟಲ್) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನವಾಗಿದೆ.

ವಿದ್ಯಾರ್ಥಿಗಳು ಮತ್ತು ಪೋಷಕರು ಹೆಚ್ಚಿನ ವಿವರಗಳಿಗಾಗಿ ಹಾಗೂ ಯಾವುದೇ ಗೊಂದಲಗಳಿದ್ದಲ್ಲಿ ಕೆಳಗಿನ ತಾಲೂಕು ಮಾಹಿತಿ ಕೇಂದ್ರಗಳನ್ನು ಅಥವಾ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದು.

ಬಳ್ಳಾರಿ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರ, ಬಳ್ಳಾರಿ. ಮೊ.8310321101.

ಸಂಡೂರು: ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತೋಟಗಾರಿಕೆ ಇಲಾಖೆ, ಸಂಡೂರು. ಮೊ.9036925966 / 8660575061.

ಸಿರುಗುಪ್ಪ: ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನಗರಸಭೆ ಆವರಣ, ಬಳ್ಳಾರಿ ರಸ್ತೆ, ಸಿರುಗುಪ್ಪ. ಮೊ.9148889975 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular