HomeIndiaJob Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : 4 ಸಾವಿರಕ್ಕೂ ಹೆಚ್ಚು ಇನ್ಸ್ ಪೆಕ್ಟರ್ ಹುದ್ದೆಗಳ...

Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : 4 ಸಾವಿರಕ್ಕೂ ಹೆಚ್ಚು ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ  ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು  ಎಸ್ಎಸ್‌ ಸಿಯ ಅಧಿಕೃತ ವೆಬ್ಸೈಟ್ ssc.gov.in. ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. 

ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ 4187 ಸಬ್ ಇನ್ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಎಸ್ಎಸ್ಸಿ ಈ ನೇಮಕಾತಿ ಡ್ರೈವ್ ನಡೆಸುತ್ತಿದೆ.

ಪ್ರಮುಖ ದಿನಾಂಕಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: ಮಾರ್ಚ್ 4, 2024

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 28, 2024

ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ : ಮಾರ್ಚ್ 29, 2024

‘ಅರ್ಜಿ ನಮೂನೆ ತಿದ್ದುಪಡಿಗೆ ವಿಂಡೋ’ ಮತ್ತು ತಿದ್ದುಪಡಿ ಶುಲ್ಕಗಳ ಆನ್ಲೈನ್ ಪಾವತಿಯ ದಿನಾಂಕ: ಮಾರ್ಚ್ 30 ರಿಂದ ಮಾರ್ಚ್ 31, 2024

ಕಂಪ್ಯೂಟರ್ ಆಧಾರಿತ ಪರೀಕ್ಷೆಯ ವೇಳಾಪಟ್ಟಿ: ಮೇ 9, 10, ಮತ್ತು 13, 2024

ಖಾಲಿ ಹುದ್ದೆಗಳ ವಿವರ

ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಎಕ್ಸೆ)-ಪುರುಷ: 125

ಪೊಲೀಸ್  ಸಬ್ ಇನ್ಸ್ಪೆಕ್ಟರ್ (ಎಕ್ಸೆ)-ಮಹಿಳೆ: 61

‌CAPF ಸಬ್ ಇನ್ಸ್ಪೆಕ್ಟರ್ (ಜಿಡಿ): 4001

ಒಟ್ಟು ಹುದ್ದೆ: 4187

ಅರ್ಜಿ ಶುಲ್ಕ

ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ.ಗಳನ್ನು ಪಾವತಿಸಬೇಕಾಗುತ್ತದೆ. ಮಹಿಳಾ ಅಭ್ಯರ್ಥಿಗಳು ಮತ್ತು ಮೀಸಲಾತಿಗೆ ಅರ್ಹರಾದ ಪರಿಶಿಷ್ಟ ಜಾತಿ (ಎಸ್ಸಿ), ಪರಿಶಿಷ್ಟ ಪಂಗಡ (ಎಸ್ಟಿ) ಮತ್ತು ಮಾಜಿ ಸೈನಿಕರಿಗೆ ಶುಲ್ಕ ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular