HomeLatest NewsJOB ALERT : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಮಾ.13 ರಂದು ನೇರ ಸಂದರ್ಶನ

JOB ALERT : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಮಾ.13 ರಂದು ನೇರ ಸಂದರ್ಶನ

ಶಿವಮೊಗ್ಗ :   ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉದ್ಯೋಗಕ್ಕೆ ಆಯ್ಕೆ ಮಾಡಿಕೊಳ್ಳಲು ಮಾ.13 ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ.

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಮಾ.13 ರ ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಿದ್ದು, ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಿ, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವರು. ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮಾ ಮತ್ತು ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೊಡೇಟಾ(ರೆಸ್ಯೂಮ್) ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಸಂದರ್ಶನದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ:08182-255293, 9380663606 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular