HomeKarnatakaJOB ALERT : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಆ.29 ರಂದು ನೇರ ಸಂದರ್ಶನ

JOB ALERT : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಆ.29 ರಂದು ನೇರ ಸಂದರ್ಶನ

ಶಿವಮೊಗ್ಗ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರ ವತಿಯಿಂದ ಆಗಸ್ಟ್ 29 ರಂದು ಬೆಳಿಗ್ಗೆ 10 ಗಂಟೆಗೆ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸುತಿದ್ದು, ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮಾ ಅಥವಾ ಯಾವುದೇ ಪದವಿ ತೇರ್ಗಡೆಯಾಗಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಅರ್ಹರಾಗಿರುತ್ತಾರೆ.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಬಯೋ-ಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಸಂದರ್ಶನದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿದ್ದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 9380663606/ 9108235132 ಗಳನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಪಿಹೆಚ್‌ಡಿ ಫೆಲೋಶಿಪ್‌ಗೆ ಅರ್ಜಿ ಆಹ್ವಾನ

 2026-27ನೇ ಸಾಲಿಗೆ ವಿಶ್ವವಿದ್ಯಾಲಯಗಳಲ್ಲಿ ಪಿಹೆಚ್‌ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಫೆಲೋಶಿಪ್ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

 ರಾಜ್ಯ ಸರ್ಕಾರದ ಅಲ್ಪಸಂಖ್ಯಾತ ಕಲ್ಯಾಣ ನಿರ್ದೇಶನಾಲಯದ ಸೂಚನೆಯಂತೆ ಈ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಬೌದ್ಧ ಹಾಗೂ ಸಿಖ್ ಸಮುದಾಯಕ್ಕೆ ಸೇರಿದ ಅರ್ಹ ಪೂರ್ಣಕಾಲಿಕ ಪಿಹೆಚ್‌ಡಿ ಸಂಶೋಧನಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/…/DepartmentServices ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಆನ್‌ಲೈನ್ ಅರ್ಜಿ ಪ್ರತಿ ಹಾಗೂ ಅಗತ್ಯ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಶಿವಮೊಗ್ಗದ ದುರ್ಗಿಗುಡಿ, 5ನೇ ಪ್ಯಾರಲಲ್ ರಸ್ತೆಯ ಸತ್ಯಶ್ರೀ ಆರ್ಕೇಡ್ 1ನೇ ಮಹಡಿಯಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಕಚೇರಿಗೆ ಸಲ್ಲಿಸಬೇಕಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನಾಂಕವಾಗಿರುತ್ತದೆ.

 ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು ಹಾಗೂ ಸರ್ಕಾರದಿಂದ ಶಾಸನಬದ್ಧ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರಬೇಕು. ಅಭ್ಯರ್ಥಿಯ ಗರಿಷ್ಠ ವಯೋಮಿತಿ 35 ವರ್ಷ ಮೀರಬಾರದು ಹಾಗೂ ಪೋಷಕರ ಅಥವಾ ಪಾಲಕರ ವಾರ್ಷಿಕ ಆದಾಯವು ರೂ. 8.00 ಲಕ್ಷಗಳ ಮಿತಿಯೊಳಗಿರಬೇಕು. ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗದಲ್ಲಿರುವ ಅಭ್ಯರ್ಥಿಗಳು ಈ ಫೆಲೋಶಿಪ್‌ಗೆ ಅರ್ಹರಿರುವುದಿಲ್ಲ. ಜೊತೆಗೆ ಯೋಜನೆಯ ಧನಸಹಾಯ ಪಡೆಯಲು ಅಭ್ಯರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಹಾಗೂ ಎನ್ ಪಿ ಸಿ ಐ ಮ್ಯಾಪಿಂಗ್ ಸಕ್ರಿಯಗೊಳಿಸಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಯೋಜನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳಿಗಾಗಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ದೂರವಾಣಿ ಸಂಖ್ಯೆ 08182-220206 ಅನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular