ಬೆಂಗಳೂರು : ಸರ್ಕಾರಿ ಹುದ್ದೆಯ ಆಕಾಂಕ್ಷಿಗಳಿಗೆ ಕಂದಾಯ ಇಲಾಖೆ ಗುಡ್ ನ್ಯೂಸ್ ನೀಡಿದೆ. ಶೀಘ್ರವೇ ರಾಜ್ಯದಲ್ಲಿ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಸಿದ್ದತೆ ನಡೆಸಿದೆ.
ರಾಜ್ಯದಲ್ಲಿ ಒಟ್ಟಾರೆ 1,820 ಹುದ್ದೆಗಳು ಖಾಲಿ ಇದ್ದು, ಈ ಪೈಕಿ ಒಂದು ಸಾವಿರ ಹುದ್ದೆಗಳಿಗೆ ಸದ್ಯವೇ ನೇಮಕಾತಿ ನಡೆಯಲಿದೆ. ಪಿಯುಸಿ ಓದಿರುವ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಎಲ್ಲ ಜಿಲ್ಲೆಗಳಲ್ಲಿ ಮಂಜೂರಾದ ಹುದ್ದೆಗಳು, ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಹುದ್ದೆಗಳು ಹಾಗೂ ಖಾಲಿ ಹುದ್ದೆಗಳಿಗನುಗುಣವಾಗಿ ಪ್ರಸಕ್ತ ಖಾಲಿಯಿರುವ 1820 ಹುದ್ದೆಗಳ ಪೈಕಿ 1000 ಹುದ್ದೆಗಳನ್ನು ನೇರನೇಮಕಾತಿಯಡಿ ಭರ್ತಿಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ.