JOB ALERT : ‘KPSC’ ಯಿಂದ 2 ಸಾವಿರ ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಸಲು ರೆಡಿಯಾಗಿ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದು, ರಾಜ್ಯದಲ್ಲಿ ‘2,000 ಹುದ್ದೆ’ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲು ಸಿದ್ದವಾಗಿದೆ. ನೀವು ಕೂಡ ಅರ್ಜಿ ಸಲ್ಲಿಸಲು ಸಿದ್ದರಾಗಿ.

ಹೌದು. ಪಶುವೈದ್ಯಾಧಿಕಾರಿಗಳು 400 ಹುದ್ದೆ, ಕೃಷಿ ಸಹಾಯಕ ಅಧಿಕಾರಿಗಳ 300 ಹುದ್ದೆ, ಶಿಕ್ಷಣ ಇಲಾಖೆಯಲ್ಲಿ 140 ಮುಖ್ಯ ಶಿಕ್ಷಕರ ಹುದ್ದೆ, ಜಲ ಸಂಪನ್ಮೂಲ ಇಲಾಖೆಯಲ್ಲಿ 100 ಸಹಾಯಕ ಇಂಜಿನಿಯರ್ ಹುದ್ದೆ, ಬಿಬಿಎಂಪಿಯಲ್ಲಿ 100 ಸಹಾಯಕ ಇಂಜಿನಿಯರ್ ಹುದ್ದೆ, ಸಾರಿಗೆ ಇಲಾಖೆಯಲ್ಲಿ 76 ಮೋಟಾರ್ ವಾಹನ ನಿರೀಕ್ಷಕರ ಹುದ್ದೆ, ಜಲಸಂಪನ್ಮೂಲ ಇಲಾಖೆಯಲ್ಲಿ ಕಿರಿಯ ಇಂಜಿನಿಯರ್ ಗಳ 300 ಹುದ್ದೆ, ಗೆಜೆಟೆಡ್ ಪ್ರೊಬೇಷನರಿ 40 ಹುದ್ದೆಗಳು, ವಿವಿಧ ಇಲಾಖೆಗಳಲ್ಲಿ ಎಪ್.ಡಿ.ಎ., ಎಸ್ಡಿಎ, ಶೀಘ್ರ ಲಿಪಿಕಾರ ಸುಮಾರು 2000 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಪ್ರಸ್ತಾವನೆಗಳ ವಿವರಗಳನ್ನು ಕೆಪಿಎಸ್ಸಿ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಹಾಗೆಯೇ ಜಲಸಂಪನ್ಮೂಲ ಇಲಾಖೆಯಲ್ಲಿನ 300 ಕಿರಿಯ ಇಂಜಿನಿಯರ್, 43 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳು, ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವಂತ 140 ಮುಖ್ಯೋಪಾಧ್ಯಾಯರು, ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವಂತ 100 ಸಹಾಯ ಇಂಜಿನಿಯರ್, ಬಿಬಿಎಂಪಿಯಲ್ಲಿನ 100 ಸಹಾಯಕ ಇಂಜಿನಿಯರ್, ಸಾರಿಗೆ ಇಲಾಖೆಯಲ್ಲಿನ 76 ಮೋಟಾರು ವಾಹನ ನಿರೀಕ್ಷಕರ ಹುದ್ದೆ, ಸೇರಿದಂತೆ ಎಫ್ ಡಿಎ, ಎಸ್ ಡಿಎ ಹುದ್ದೆ ಸೇರಿ 2000 ಹುದ್ದೆಗಳ ಭರ್ತಿಗೆ ಪ್ರಸ್ತಾವನೆಗಳು ಬಂದಿರುವುದಾಗಿ ಮಾಹಿತಿ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read