ಬಳ್ಳಾರಿ ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಿರುದ್ಯೋಗಿ ಯುವಕರಿಗಾಗಿ ಜೂ.01 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಚೋರನೂರು ರಸ್ತೆಯ ಬಾಬೂಜಿ ನಗರದ 2ನೇ ವಾರ್ಡ್ ನ ಬಸವೇಶ್ವರ ವೃತ್ತದ ಭಾರತ್ ಫೈನಾನ್ಷಿಯಲ್ ಇಂಕ್ಲೂಶನ್ ಲಿಮಿಟೆಡ್ ಕಚೇರಿಯಲ್ಲಿ ವಿಶೇಷ ನೇರ ಸಂದರ್ಶನ ಆಯೋಜಿಸಲಾಗಿದೆ.
ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಪುರುಷ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ವಿಶೇಷ ಸೂಚನೆ: ಈ ಸಂದರ್ಶನದಲ್ಲಿ ವಿಜಯನಗರ ಜಿಲ್ಲೆಯ ಅಭ್ಯರ್ಥಿಗಳಿಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು. ಪಿಯುಸಿ ಅಥವಾ ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಸ್ವ-ವಿವರದ ಪ್ರತಿ, ಆಧಾರ್ ಕಾರ್ಡ್ ಪ್ರತಿ ಹಾಗೂ ದ್ವಿಚಕ್ರ ವಾಹನ ಕಡ್ಡಾಯವಾಗಿ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಬಳ್ಳಾರಿ ಅಥವಾ ಮೊ.7619207762, 9663263086, 7676774293, 6360408094 ಗೆ ಸಂಪರ್ಕಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಸದಾವಕಾಶವನ್ನು ಬಳಸಿಕೊಳ್ಳಬೇಕು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರಿ ಐಟಿಐ ಕಾಲೇಜು ಪ್ರವೇಶಾತಿಗೆ ಅರ್ಜಿ ಆಹ್ವಾನ
ನಗರದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ 2026-27 ನೇ ಸಾಲಿಗೆ ವಿವಿಧ ವೃತ್ತಿಗಳ 569 ಸ್ಥಾನಗಳ ಪ್ರವೇಶಕ್ಕಾಗಿ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯ ಪಂಡಿತಾರಾದ್ಯ ಅವರು ತಿಳಿಸಿದ್ದಾರೆ.
10 ನೇ ತರಗತಿ ಪಾಸ್/ಫೇಲ್ ಆದ ಅಭ್ಯರ್ಥಿಗಳು ನೇರವಾಗಿ ಸಂಸ್ಥೆಗೆ ಭೇಟಿ ನೀಡಿ ಆಫ್ ಲೈನ್ ಮೂಲಕ ಅರ್ಜಿ ಪಡೆದು ಖಾಲಿ ಇರುವ ವಿವಿಧ ವೃತ್ತಿಗಳ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಬಹುದು.ಪ್ರತಿದಿನ ಆಫ್ ಲೈನ್ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾರನೇ ದಿನವೇ ಮೆರಿಟ್ ಆಧಾರದಲ್ಲಿ ದಾಖಲೆ ಪರಿಶೀಲನೆ ನಂತರ ಪ್ರವೇಶ ಪಡೆಯಬಹುದಾಗಿದೆ.ಅರ್ಜಿ ಸಲ್ಲಿಸಲು ಜೂನ್ 02 ರಿಂದ ಆಗಸ್ಟ್ 31 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಅರ್ಜಿಯಲ್ಲಿ ನಮೂದಿಸಿದ ಸಂಸ್ಥೆಯಲ್ಲಿ ಮಾತ್ರ ದಾಖಲೆ ಪರಿಶೀಲನೆಗೆ ಕಡ್ಡಾಯವಾಗಿ ಹಾಜರಾಗಬೇಕು.
ಸೂಚನೆ: ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಮಯದಲ್ಲಿ ನೀಡುವ ಮೊಬೈಲ್ ಸಂಖ್ಯೆ ಹಾಗೂ ಇ-ಮೇಲ್ ವಿಳಾಸವನ್ನು ಪ್ರವೇಶಾತಿ ಮತ್ತು ಪರೀಕ್ಷೆ ಮುಗಿಯುವವರೆಗೂ ಬದಲಾವಣೆ ಮಾಡುವಂತಿಲ್ಲ. ಹೆಚ್ಚಿನ ಮಾಹಿತಿಗಾಗಿ ಮೊ.9902351985 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

