JOB ALRT : ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ, ಇಲ್ಲಿದೆ ಮಾಹಿತಿ

ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ (ಎಟಿಎಂಎ) ಯೋಜನೆಯಡಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 2 ಹುದ್ದೆಗಳಿಗೆ ಒಪ್ಪಂದದ ಆಧಾರದ ಮೇಲೆ 2023-24ನೇ ಸಾಲಿನ ಸೀಮಿತ ಅವಧಿಗೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸೋಮವಾರಪೇಟೆ ತಾಲ್ಲೂಕು ಹಾಗೂ ವಿರಾಜಪೇಟೆ ತಾಲ್ಲೂಕುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ  ನೇಮಕಾತಿ ಮಾಡಿಕೊಳ್ಳಲು ಷರತ್ತಿಗೆ ಒಳಪಟ್ಟು ಅರ್ಜಿಗಳನ್ನು ಆಹ್ವಾನಿಸಿದೆ.

ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ವಿದ್ಯಾರ್ಹತೆ ಎಂ.ಎಸ್ಸಿ(ಕೃಷಿ/ ತೋಟಗಾರಿಕೆ/ಮೀನುಗಾರಿಗೆ/ ಅರಣ್ಯ/ ರೇಷ್ಮೆ). ಕನಿಷ್ಟ 2 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಮ್ಎಸ್ ಆಫಿಸ್ನಲ್ಲ್ಲಿ ಪರಿಣಿತಿ ಹೊಂದಿರಬೇಕು. ಗರಿಷ್ಠ 45 ವರ್ಷದೊಳಗಿರಬೇಕು. ಮಾಸಿಕ ರೂ.30 ಸಾವಿರ ಗೌರವ ಧನ ನೀಡಲಾಗುತ್ತದೆ.

ಈ ಹುದ್ದೆಗಳಿಗೆ ಅರ್ಹರಿರುವ ಆಭ್ಯರ್ಥಿಗಳು ಫೆಬ್ರವರಿ, 15 ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಅರ್ಜಿಗಳನ್ನು ಸಲ್ಲಿಸುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ(ಆತ್ಮ ವಿಭಾಗ) ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ ಅವರು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read