ಬೆಂಗಳೂರು: ಜನವರಿ ಕೊನೆಯ ವಾರ ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜನೆ ಕುರಿತಾಗಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪೂರ್ವಭಾವಿ ಸಭೆ ನಡೆಸಿದ ಸಿಎಂ, ಜನವರಿ ಕೊನೆವಾರ ಉದ್ಯೋಗ ಮೇಳ ಆಯೋಜಿಸಲು ಸಚಿವರ ತಂಡ ರಚಿಸಲಾಗುವುದು ಎಂದು ಹೇಳಿದ್ದಾರೆ.
ಸಚಿವರಾದ ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ್ ಪಾಟೀಲ್, ಎಂ.ಸಿ. ಸುಧಾಕರ್, ಬಿ. ನಾಗೇಂದ್ರ, ಸಂತೋಷ್ ಲಾಡ್, ದಿನೇಶ್ ಗುಂಡೂರಾವ್ ಅವರನ್ನು ಒಳಗೊಂಡ ಸಚಿವರ ತಂಡ ರಚಿಸುವಂತೆ ಸಿಎಂ ಸೂಚಿಸಿದ್ದಾರೆ.
ಈ ಸಚಿವರ ತಂಡ, ಕೈಗಾರಿಕೆಗಳೊಂದಿಗೆ ಉದ್ಯೋಗದಾತದೊಂದಿಗೆ ಸಭೆ ನಡೆಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು. ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಉದ್ಯೋಗ ಮೇಳ ಆಯೋಜಿಸಬೇಕು. ಯುವಕರಿಗೆ ಉದ್ಯೋಗಾವಕಾಶ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಹೇಳಿದ್ದಾರೆ.
ಯುವಜನತೆ ವಿದ್ಯಾರ್ಹತೆ ತಕ್ಕಂತೆ ಉತ್ತಮ ಉದ್ಯೋಗ ಕಂಡುಕೊಳ್ಳುವ ಸಲುವಾಗಿ ಆದ್ಯತೆ ನೀಡಲಾಗುತ್ತಿದ್ದು, ರಾಜ್ಯ ಮಟ್ಟದ ಉದ್ಯೋಗ ಮೇಳವನ್ನು ಯಶಸ್ವಿಯಾಗಿ ಆಯೋಜನೆ ಮಾಡಲು ಸಚಿವರನ್ನು ಒಳಗೊಂಡ ಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಸಮಿತಿಯ ಇತರ… pic.twitter.com/0n3M1WUJuy
— DIPR Karnataka (@KarnatakaVarthe) December 29, 2023

