ಪಿಯುಸಿ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ: ನೇರ ಸಂದರ್ಶನ

ಕಲಬುರಗಿ: ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂಭಾಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಮಾರ್ಚ್ 28 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ನೇರ ಸಂದರ್ಶನದಲ್ಲಿ ಭಾಗವಹಿಸುವ ಕಂಪನಿಗಳ ವಿವರ ಇಂತಿದೆ. ಕಲಬುರಗಿಯ ಎಸ್.ಬಿ.ಐ ಲೈಫ್ ಇನ್ಸುರೆನ್ಸ್‍ದಲ್ಲಿ ಯೂನಿಟ್ ಮ್ಯಾನೇಜರ್ ಹುದ್ದೆಗೆ ಪಿ.ಯು.ಸಿ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 25 ರಿಂದ 35 ವರ್ಷದೊಳಗಿರಬೇಕು.

ಲೈಫ್ ಮಿತ್ರಾ ಹುದ್ದೆಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 30 ರಿಂದ 60 ವರ್ಷದೊಳಗಿರಬೇಕು.

ಮಠ ಮಲ್ಟಿ ಮೈಂಡ್ಸ್‍ ನಲ್ಲಿ ಟೆಲಿ ಕಾಲರ್ ಹುದ್ದೆಗೆ ಪಿಯುಸಿ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

ಎ.ಬಿ. ಪವರ್ ಸಿಸ್ಟಮ್‍ದಲ್ಲಿ ಎಫ್.ಎಸ್.ಇ. ಕೋ-ಆರ್ಡಿನೇಟರ್ ಹುದ್ದೆಗೆ ಪಿಯುಸಿ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30ವರ್ಷದೊಳಗಿರಬೇಕು.

ಎಫ್.ಎಸ್.ಇ.(ಫೀಲ್ಡ್ ಸರ್ವೀಸ್ ಇಂಜಿನಿಯರಿಂಗ್) ಹುದ್ದೆಗೆ ಐ.ಟಿ.ಐ.(ಎಲ್ಲಾ ಟ್ರೇಡ್)  ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30ವರ್ಷದೊಳಗಿರಬೇಕು.

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್(ಬಯೋಡೇಟಾ), ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ ದಾಖಲಾತಿಗಳೊಂದಿಗೆ ಮೇಲ್ಕಂಡ ದಿನದಂದ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.   ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಸಾಮಾಜಿಕ ಅಂತರ ಕಾಯ್ದಕೊಳ್ಳಬೇಕು.

ಈ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846 ಗೆ ಸಂಪರ್ಕಿಸಲು ಕೋರಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read